February 19, 2026

Newsnap Kannada

The World at your finger tips!

police 1

ಮದ್ವೆಯಾದ ಮಗಳ ತಾಳಿ ಕಿತ್ತು, ಜುಟ್ಟು ಹಿಡಿದು ಎಳೆದಾಡಿದ ತಂದೆ – ಪೋಲಿಸರಿಗೆ ದೂರು

Spread the love

ಸಿನಿಮಾ ಕಥೆಯ ಮಾದರಿಯಲ್ಲೇ ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿ, ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿದ ಘಟನೆ ಜರುಗಿದೆ

ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಜರುಗಿದೆ

ಈ ಗ್ರಾಮದ ಯುವತಿ ಹಲ್ಲರೆ ಗ್ರಾಮದ ಮಹೇಂದ್ರ ಎಂಬವರನ್ನು ಕಳೆದ ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ನಂತರ ಡಿಸೆಂಬರ್ 8 ರಂದು ಮದುವೆಯಾಗಿದ್ದಾರೆ.

1a60bd08 04b7 44e4 810e f0b28ad9a650

ನಂಜನಗೂಡಿನ ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ತಮ್ಮ ವಿವಾಹವನ್ನು ನೊಂದಾಯಿಸಿಕೊಳ್ಳಲು ಬಂದಿದ್ದಾರೆ. ನೋಂದಣಿ ಪ್ರಕ್ರಿಯೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆಯೇ ಯುವತಿ ತಂದೆ ಬಸವರಾಜ ನಾಯ್ಕ್ ಪ್ರತ್ಯಕ್ಷವಾಗಿ ಮಗಳ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಹಾಕಿ ಜುಟ್ಟು ಹಿಡಿದು ಮನೆಗೆ ಕರೆದುಕೊಂಡು ಹೋಗಲು ಯತ್ನಿಸಿದ್ದಾರೆ.

ಈ ವೇಳೆ ಸಾರ್ವವನಿಕರು ಮಧ್ಯೆ ಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ ಮತ್ತು ಯುವತಿ ತನ್ನ ತಂದೆಯಿಂದಲೇ ತನಗೆ ರಕ್ಷಣೆ ಬೇಕೆಂದು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

error: Content is protected !!