Trending

ಗುರುಪ್ರೀತ್ ಕೌರ್ ಜೊತೆ ಹಸೆಮಣೆ ಏರಿದ ಪಂಜಾಬ್ ಸಿಎಂ ಭಗವಂತ್ ಮಾನ್

ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​ ಮತ್ತು ಡಾ. ಗುರುಪ್ರೀತ್​ ಕೌರ್ ಗುರುವಾರ ಸಪ್ತಪದಿ ತುಳಿದರು.ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ಮದುವೆ ನಡೆಯಿತು.

ಇದೊಂದು ಖಾಸಗಿ ಸಮಾರಂಭವಾಗಿದ್ದು, ಕೆಲವೇ ಗಣ್ಯರು ಹಾಗೂ ಎರಡು ಕುಟುಂಬಗಳ ಆಪ್ತರ ಸಮ್ಮುಖದಲ್ಲಿ ಭಗವಂತ್​ ಮಾನ್ ಮತ್ತು ಗುರುಪ್ರೀತ್​ ಕೌರ್​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ, ಎಎಪಿ ನಾಯಕ ಹಾಗೂ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ವೃತ್ತಿಯಲ್ಲಿ ವೈದ್ಯೆಯಾಗಿರುವ ಗುರುಪ್ರೀತ್​ ಕೌರ್​ ಕುರುಕ್ಷೇತ್ರ ಜಿಲ್ಲೆಯ ಪೆಹೊವಾ ಮೂಲದವರು. ಅವರ ತಂದೆ ಇಂದ್ರಜಿತ್​ ಸಿಂಗ್​ ಓರ್ವ ರೈತ. ಅವರ ತಾಯಿ ರಾಜ್​ ಕೌರ್​ ಗೃಹಿಣಿ.

ಬೆಂಗಳೂರಿನಲ್ಲಿ PU ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್‌ ತರುವಂತಿಲ್ಲ : ತಂದ್ರೆ ಕೇಸ್‌ ದಾಖಲು

48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದರು. 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿ ಇಂದ್ರಪ್ರೀತ್ ಕೌರ್ ಅವರಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾಜಿ ಪತ್ನಿ ಹಾಗೂ ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದಾರೆ. ಇದು ಅವರ ಎರಡನೇ ಮದುವೆಯಾಗಿದ್ದು, 32 ವರ್ಷದ ಗುರುಪ್ರೀತ್​ ಕೌರ್​ ಮತ್ತು ಭಗವಂತ್​ ಮಾನ್​ ನಡುವೆ 16 ವರ್ಷಗಳ ವಯಸ್ಸಿನ ಅಂತರವಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024