ಕೋವಿಡ್ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಹಾಸ್ಟಲ್‌ಗಳು,ಶಿಕ್ಷಣ ಸಂಸ್ಥೆಗಳು,ಶಾಪಿಂಗ್ ಮಾಲ್ , ಮಾರುಕಟ್ಟೆ, ರೆಸ್ಟೋರೆಂಟ್, ಪಬ್‌ಗಳು,ಕಚೇರಿ ಕಾರ್ಖಾನೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರು ಸಹಕಾರವನ್ನು ನೀಡಬೇಕೆಂದು ಸರ್ಕಾರ ಕೋರಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿರುವ ಇಲಾಖೆ, ಈ ಕುರಿತು ಮಾರ್ಷಲ್/ಪೋಲೀಸ್ ಸಿಬ್ಬಂದಿಯ ಸಹಾಯ ಪಡೆಯಲು ಸೂಚಿಸಿದೆ.
ಹೊಸ ಮಾರ್ಗಸೂಚಿ ಬಿಡುಗಡೆಗೆ ಕಾರಣವೇನು..?
ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯಲ್ಲಿ ಏರಿಕೆಯನ್ನು ಗಮನಿಸಲಾಗಿದ್ದು ಜೂನ್ 09 ರಂದು 471 ಪ್ರಕರಣಗಳು ಹಾಗೂ ಪಾಸಿಟಿವ್ ಪ್ರಮಾಣ 2.14% ವರದಿಯಾಗಿತ್ತು. ಕೋವಿಡ್ 19 ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮವನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸವ ಅಗತ್ಯವಿದೆ ಎಂದು ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಸರ್ಕಾರ ಹೊರಡಿಸಿರುವ ಆದೇಶ ಇಂತಿದೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು