ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಸಿಕ್ಕ ಸಿಕ್ಕಲ್ಲಿ ಉಗುಳಿದರೆ ದಂಡ ಕಟ್ಟಲು ರೆಡಿ ಇರಿ !

Team Newsnap
1 Min Read

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಕಾರಣಕ್ಕಾಗಿ ಕಡ್ಡಾಯ ಮಾಸ್ಕ್ ಧರಿಸಬೇಕು. ಎಲ್ಲೆಂದರಲ್ಲಿ ಉಗುಳುವುದನ್ನು ನಿಷೇಧಿಸಿದೆ. ನಿಯಮ ಉಲ್ಲಂಘಿಸಿದರೆ ದಂಡ ಕಟ್ಟಬೇಕು ಎಂಬ ನಿಯಮ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಾಥಮಿಕ ಹಂತದಲ್ಲೇ ಕೊರೊನಾಗೆ ಕಡಿವಾಣ ಹಾಕುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೋವಿಡ್ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

ರಾಜ್ಯದಲ್ಲಿ ಫೆ.28 ರಿಂದ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು.

ಆದರೆ, ಪ್ರಸ್ತುತ ಕರ್ನಾಟಕ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಕೋವಿಡ್ ನೂತನ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. 

ಕಡ್ಡಾಯ ನಿಯಮಗಳು ಜಾರಿ ಏನು? :

MASK 1

ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಅಂತರ ಪಾಲನೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಬೇಕು. ಒಂದು ವೇಳೆ ಉಗುಳುವುದು ಕಂಡರೆ ಸ್ಥಳೀಯ ಆಡಳಿತಾಧಿಕಾರಿಗಳು ದಂಡ ವಿಧಿಸುವಂತೆ ನಿಯಮ ಜಾರಿಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

Share This Article
Leave a comment