ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ ಟಾಟಾ ಫ್ಯಾಕ್ಟರಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿವೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಹಾಗು ಕಾರ್ಮಿಕರು ಹೊರಗೋಡಿಬಂದಿದ್ದಾರೆ.
ಕೆಲ ಮಹಿಳಾ ಸಿಬ್ಬಂದಿಗಳಿಗೆ ದಟ್ಟ ಹೊಗೆಯಿಂದಾಗಿ ಉಸಿರಾಟದ ತೊಂದರೆ ಎದುರಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದುಬಂದಿದೆ.MLA ಮುನಿರತ್ನ ಮನೆ ಮೇಲೆ SIT ದಾಳಿ
ರಾಯಕೋಟೆ, ಡಂಕನಿಕೋಟೆ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ