Trending

ಕೋವಿಡ್ ಲಸಿಕೆ ಸಂಗ್ರಹಕ್ಕೆ ಸಿಲಿಕಾನ್‍ಸಿಟಿಯಲ್ಲಿ ಭಾರಿ ಸಿದ್ಧತೆ

ಈ ಶತಮಾನದಲ್ಲಿ ವಿಶ್ವದಾದ್ಯಂತ ಮಾನವ ಜನಾಂಗವನ್ನು ತೀವ್ರರೀತಿಯಲ್ಲಿ ಕಾಡಿತ್ತಿರುವ ಕೋವಿಡ್-19ಕ್ಕೆ ಲಸಿಕೆ ಕಂಡು ಹಿಡಿಯುವಲ್ಲಿ ವಿಶ್ವದ ಪ್ರಮುಖ ದೇಶಗಳಲ್ಲಿ ಪ್ರಯೋಗಗಳು ನಡೆಯುತ್ತಿದ್ದು ಯಶಸ್ಸಿನ ಹಂತಕ್ಕೆ ಬರಲಾಗುತ್ತಿದೆ ಎಂದು ಸಿಹಿಸುದ್ದಿ ಪ್ರತಿದಿನ ಮಾಧ್ಯಮಗಳಲ್ಲಿ ಬರುತ್ತಿರುವ ಈ ಸಂದರ್ಭದಲ್ಲೇ ಶೀಘ್ರದಲ್ಲೇ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿಯೂ ಹೊರಬಿದ್ದಿದೆ.


ಪ್ರಥಮ ಹಂತದಲ್ಲಿ ಕರೋನ ಲಸಿಕೆಯನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಗ್ರಹಸಿಡುವ ಬಗ್ಗೆಈಗಾಗಲೇ ಸಿದ್ಧತೆ ನಡೆಯುತ್ತಿದೆ. ಸಿಲಿಕಾನ್ ಸಿಟಿಯ ಟೌನ್‍ಹಾಲ್ ಸಮೀಪದ ದಾಸಪ್ಪ ಆಸ್ಪತ್ರೆಯಲ್ಲಿ ಈ ಮಹತ್ವದ ಲಸಿಕೆ ಸಂಗ್ರಹಿಸಿಡಲು ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾ ನಗರಪಾಲಕೆ ಮುಂದಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಆಸ್ಪತ್ರೆ ಸುತ್ತ ಸಿಸಿಟಿವಿ ಅಳವಡಿಸಲು ಬಿಬಿಎಂಪಿ ಕ್ರಮಕೈಗೊಂಡಿದೆ. ಲಸಿಕೆ ಸಾಗಿಸಲು ವಿಶೇಷ ವಾಹನ ಸೌಲಭ್ಯಕ್ಕೂ ಅಧಿಕಾರಿಳು ಸಜ್ಜಾಗಿದ್ದಾರೆ. ಈ ವೇಳೆ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಸಂಗ್ರಹಿಸಿಡುವ ಪೆಟ್ಟಿಗಳ ಪರಿಶೀಲನೆ ಮಾಡಿದರು.

ಈಗಾಗಲೇ ಬಾಗಲಕೋಟೆಯಲ್ಲೂ ಲಸಿಕೆ ಸಂಗ್ರಹದ ಕೋಲ್ಡ್ ಸ್ಟೋರೇಜ್ ನಿರ್ಮಾಣವಾಗಿದ್ದು, ಅದು 55 ಲಕ್ಷ ವ್ಯಾಕ್ಸಿನ್ ಸಂಗ್ರಹಿಸಿಡುವ ಸಾಮಥ್ರ್ಯ ಹೊಂದಿದೆ. ಈ ಕೋಲ್ಟ್ ಸ್ಟೋರೇಜ್ ನಿಂದ ಕೊಪ್ಪಳ, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ವ್ಯಾಕ್ಸಿನ್ ಹಂಚಿಕೆ ಮಾಡಬಹುದಾಗಿದೆ.


ಸರ್ಕಾರವಂತೂ ಲಸಿಕೆ ವಿತರಣೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದು, ಶ್ರೀರಾಮನಿಗೆ ಶಬರಿ ಕಾದಂತೆ, ಯಾವಾಗ ಲಸಿಕೆ ಬರುತ್ತದೋ ಎಂದು ಕಾಯುವಂತಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024