ಮ್ಯಾಟ್ರಿಮೋನಿ ಸೈಟ್ನಲ್ಲಿ ಯುವತಿಯರಿಗೆ ಮದುವೆಯಾಗುವುದಾಗಿ ನಂಬಿಸಿ 21 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿ ಖದೀಮನೊಬ್ಬ ಬೆಂಗಳೂರಿನ. ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಖದೀಮನನ್ನು ಬಂಧಿಸಿದ್ದಾರೆ
ಆರೋಪಿಯ ತಂದೆ ಈ ಹಿಂದೆ ಹೆಸ್ಕಾಂನಲ್ಲಿ ಕೆಲಸ ಮಾಡುತ್ತಿದ್ದರು ಅವರು ಮೃತಪಟ್ಟ ಹಿನ್ನೆಲೆ, ಅನುಕಂಪ ಆಧಾರದ ಮೇಲೆ ಮಗನಿಗೆ ಲೈನ್ ಮ್ಯಾನ್ ಕೆಲಸ ಸಿಕ್ಕಿತ್ತು. 8 ತಿಂಗಳ ಕಾಲ ಲೈನ್ ಮ್ಯಾನ್ ಆಗಿ ಕೆಲಸ ಮಾಡಿದ್ದ 2013ರಲ್ಲಿ ಮುದ್ದೇಬಿಹಾಳ ಮೂಲದ 23 ವರ್ಷದ ಯುವತಿಯನ್ನು ಕೊಲೆ ಮಾಡಿ ಜೈಲು ಸೇರಿದ್ದ.ಬಳಿಕ ಎರಡು ವರ್ಷ ಜೈಲು ವಾಸ ಅನುಭವಿಸಿ ಹೊರಬಂದಿದ್ದ.
ಈ ವೇಳೆ ಜೀವನ ನಿರ್ವಹಣೆಗೆ ಬೇರೆ ದಾರಿ ಕಾಣದೆ ಮ್ಯಾಟ್ರಿಮೋನಿಯಲ್ಲಿ ಪ್ರೊಪೈಲ್ ಕ್ರಿಯೇಟ್ ಮಾಡಿದ್ದ. ಹುಬ್ಬಳ್ಳಿಯ ಹೆಸ್ಕಾಂನಲ್ಲಿ ಸೆಕ್ಷನ್ ಆಫೀಸರ್ ಎಂದುಹೇಳಿಕೊಳ್ಳುತ್ತಿದ್ದ ಆರೋಪಿ 26 ಜನ ಹೆಣ್ಣುಮಕ್ಕಳಿಗೆ ನಿಮ್ಮ ಪ್ರೊಪೈಲ್ ಇಷ್ಟ ಆಗಿದೆ ಅಂಥ ನಂಬಿಸಿದ್ದನಂತೆ. ಬಳಿಕ ಅವರ ಕುಟುಂಬದ ಮಾಹಿತಿ ಪಡೆದು, ಎಕ್ಸಾಂ ಇಲ್ಲದೇ ಕೆಲ್ಸ ಕೊಡಿಸುವೆ ಎಂದು ನಂಬಿಸಿ ಮೋಸ ಮಾಡಿದ್ದಾನೆ
ಯುವತಿಯರು ಹಾಗೂ ಅವರ ಸಂಬಂಧಿಕರಿಂದ ಇವರೆಗೆ 21 ಲಕ್ಷದ 30 ಸಾವಿರಕ್ಕೂ ಅಧಿಕ ಹಣ ಪಡೆದು ಆರೋಪಿ ವಂಚನೆ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ
ಬಂದ ಹಣದಲ್ಲಿ ಗೋವಾ, ಪಾಂಡಿಚೇರಿ ಅಂಥ ಟ್ರಿಪ್ ಹೊಡೆದು ಮೋಜು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಿಜಾಪುರದಲ್ಲಿ ಅರೆಸ್ಟ್ ಮಾಡಿದ್ದಾರೆ. ಸದ್ಯ ಆತನ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲಾಗಿದೆ ಖಾತೆಯಲ್ಲಿ 1 ಲಕ್ಷದ 66 ಬಂದ ಹಣದಲ್ಲಿ ಗೋವಾ, ಪಾಂಡಿಚೇರಿ ಅಂಥ ಟ್ರಿಪ್ ಹೊಡೆದು ಮೋಜು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಿಜಾಪುರದಲ್ಲಿ ಅರೆಸ್ಟ್ ಮಾಡಿದ್ದಾರೆ. ಸದ್ಯ ಆತನ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲಾಗಿದ್ದು ಖಾತೆಯಲ್ಲಿ 1 ಲಕ್ಷದ 66 ಸಾವಿರ ರೂಪಾಯಿ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ರೂಪಾಯಿ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ