ಮೇ 2 ರ ಚುನಾವಣಾ ಫಲಿತಾಂಶ: ವಿಜಯೋತ್ಸವಕ್ಕೆ ಬ್ರೇಕ್ ಹಾಕಿದ ಚುನಾವಣಾ ಆಯೋಗ

Team Newsnap
1 Min Read

ಮೇ 2 ರ ಚುನಾವಣಾ ಫಲಿತಾಂಶದ ನಂತರ ಯಾವುದೇ ಪಕ್ಷ ಅಥವಾ ಗೆದ್ದ ಅಭ್ಯರ್ಥಿ ವಿಜಯೋತ್ಸವ ನಡೆಸದಂತೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮೇ 2ರಂದು ಪ್ರಕಟಗೊಂಡ ಮೇಲೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು ವಿಜಯೋತ್ಸವ ಹಾಗೂ ಮೆರವಣಿಗೆ ಹಮ್ಮಿಕೊಳ್ಳುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ಮಂಗಳವಾರ ಚುನಾವಣಾ ಆಯೋಗ ಈ ಕುರಿತಂತೆ ಅಧಿಸೂಚನೆ ಹೊರಡಿಸಿ, ಚುನಾವಣೆ ನಡೆದಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ವಿಜಯೋತ್ಸವ ನಡೆಸದಂತೆ ಆದೇಶ ನೀಡಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಯು ಪ್ರಮಾಣ ಪತ್ರ ಸ್ವೀಕರಿಸುವಾಗಲೂ ಅವರೊಂದಿಗೆ ಇಬ್ಬರಿಗಿಂತ ಹೆಚ್ಚು ಮಂದಿ ಇರುವಂತಿಲ್ಲ ಎಂದು ನಿಯಮ ಹೇರಿದೆ.

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನಗಳು ನಡೆದಿವೆ. ಪಶ್ಚಿಮ ಬಂಗಾಳದಲ್ಲಿ ಕೊನೆ ಹಂತದ ಮತದಾನ ಬಾಕಿ ಇದೆ. ಏಪ್ರಿಲ್ 29ರಂದು ನಡೆಯಲಿದೆ. ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟ ವಾಗಲಿದೆ.

Share This Article
Leave a comment