ಮೈಷುಗರ್ ಸರ್ಕಾರಿ ಸ್ವಾಮ್ಯದಲ್ಲಿ ಇರಲಿ : ರೈತರ ಹೋರಾಟ ಬೆಂಬಲಿಸಿ ಪತ್ರಕರ್ತರ ಧರಣಿ

Team Newsnap
1 Min Read

ಮೈಸೂರು ಸಕ್ಕರೆ ಕಾರ್ಖಾನೆಯನ್ನು (ಮೈಷುಗರ್) ಸರ್ಕಾರಿ ಸ್ವಾಮ್ಯದಲ್ಲೇ ನಡೆಸಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರು ಬೆಂಬಲ ಸೂಚಿಸಿ ಧರಣಿಯಲ್ಲಿ ಭಾಗವಹಿಸಿದ್ದರು.

ಸಂಘದ ಆವರಣದಿಂದ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಂ, ಜಿಲ್ಲಾಧ್ಯಕ್ಷ ನವೀನ್ ಚಿಕ್ಕಮಂಡ್ಯ, ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್, ಉಪಾಧ್ಯಕ್ಷರಾದ ಬಿ.ಪಿ. ಪ್ರಕಾಶ್, ಚಿನಕುರಳಿ ರಮೇಶ್, ಮಾಜಿ ಅಧ್ಯಕ್ಷರಾದ ಪಿ.ಜೆ.ಚೈತನ್ಯ ಕುಮಾರ್, ಡಿ.ಎಲ್. ಲಿಂಗರಾಜು, ಎಸ್.ಕೃಷ್ಣ ಸ್ವರ್ಣಸಂದ್ರ, ಕೆ.ಎನ್. ರವಿ, ಕೆ.ಸಿ.ಮಂಜುನಾಥ್, ಹಿರಿಯ ಪತ್ರಕರ್ತರಾದ ಬಸವರಾಜ ಹೆಗ್ಗಡೆ, ಶಿವನಂಜಯ್ಯ, ಎ.ಎಲ್. ಬಸವೇಗೌಡ, ಸಂಪಾದಕರ ಸಂಘದ ಅಧ್ಯಕ್ಷ ನವೀನ್ ಸೇರಿದಂತೆ 50ಕ್ಕೂ ಹೆಚ್ಚು ಪತ್ರಕರ್ತರು ಭಾಗವಹಿಸಿದ್ದರು.

Share This Article
Leave a comment