ಕೃಷ್ಣಲೀಲಾ’ ಖ್ಯಾತಿಯ ನಟಿ ಮಯೂರಿ ಮನೆಯಲ್ಲಿ ಈ ವರ್ಷ ದೀಪಾವಳಿ ಹಬ್ಬ ಅದ್ಧೂರಿ ಮತ್ತು ಸಂಭ್ರಮದಿಂದ ಕೂಡಿದೆ. ಏಕಂದ್ರೆ, ಮಯೂರಿ ತಮ್ಮ ಕುಟುಂಬಕ್ಕೆ ಹೊಸ ವ್ಯಕ್ತಿಯನ್ನು ಸ್ವಾಗತಿಸುತ್ತಿದ್ದಾರೆ. ಹೌದು, ನಟಿ ಮಯೂರಿ ಗರ್ಭಿಣಿಯಾಗಿದ್ದು, ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ವಿಷಯವನ್ನು ಸ್ವತಃ ಮಯೂರಿ ಅವರೇ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ದೀಪಾವಳಿ ಹಬ್ಬದ ವಿಶೇಷವಾಗಿ ಈ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದು, ಮಯೂರಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಸ್ಯಾಂಡಲ್ ವುಡ್ ನಟಿ ಮಯೂರಿ ಮತ್ತು ಅರುಣ್ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಗರ್ಭಿಣಿ ಮಯೂರಿ ಅವರ ಭರ್ಜರಿ ಫೋಟೋಶೂಟ್ ಸಹ ಮಾಡಲಾಗಿದ್ದು, ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಮಯೂರಿ ಮತ್ತು ಬಹುಕಾಲದ ಗೆಳೆಯ ಅರುಣ್ ಅವರು ಇದೇ ವರ್ಷ ಜೂನ್ 12 ರಂದು ವಿವಾಹವಾಗಿದ್ದರು. ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಾಂಗಲ್ಯಧಾರಣೆ ನೆರವೇರಿತ್ತು.
ಮಯೂರಿ ಮತ್ತು ಅರುಣ್ ಇಬ್ಬರು ಸುಮಾರು ವರ್ಷದ ಸ್ನೇಹಿತರು. ಹತ್ತು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ನಂತರ ಕುಟುಂಬಸ್ಥರ ಒಪ್ಪಿಗೆ ಪಡೆದು ವೈವಾಹಿಕ ಜೀವನಕ್ಕೆ ಪ್ರವೇಶ ಮಾಡಿದ್ದರು. ಮದುವೆಯಾಗಿ ವರ್ಷ ತುಂಬುವಷ್ಟರಲ್ಲೇ ಪುಟ್ಟ ಕಂದಮ್ಮನನ್ನು ಸ್ವಾಗತಿಸಲು ಮಯೂರಿ ಕುಟುಂಬ ಸಜ್ಜಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ