ಏನು ಕೆಲಸ ಮಾಡಿದ್ದೀರಿ ಎಂದ ಪ್ರಶ್ನೆ ಮಾಡಿದ ಯುವಕನಿಗೆ ಎಂ ಬಿ ಪಾಟೀಲ್ ಕಪಾಳ ಮೋಕ್ಷ

Team Newsnap
1 Min Read

ಕಾಂಗ್ರೆಸ್ ನ ಮುಖ್ಯಮಂತ್ರಿ ಆಕಾಂಕ್ಷಿ , ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಕೆಲಸ ಕೇಳಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಕಪಾಳಮೋಕ್ಷ ಮಾಡಿದ್ದ ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ್.

ಈ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಎಂ.ಬಿ. ಪಾಟೀಲ್ ಅವರು ಯುವಕನ ಕೆನ್ನೆಗೆ ಬಾರಿಸಿದ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರದ ದೇವಾಪೂರ ಗ್ರಾಮದಲ್ಲಿ ನಡೆದಿದೆ.

ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ.ಬಿ. ಪಾಟೀಲ್ ಶನಿವಾರ ತಡರಾತ್ರಿ ಪ್ರಚಾರಕ್ಕೆ ಬಂದಿದ್ದರು. ಈ ವೇಳೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ತುಪ್ಪದ್ ಅವರಿಗೆ ಕಪಾಳ ಮೋಕ್ಷ ಮಾಡಿದರು.ಇದನ್ನು ಓದಿ –ಸಿದ್ಧಗಂಗಾ ಮಠದ ಉತ್ತರಾಧಿಕಾರಿ: ನಿರಂಜನ ಜಂಗಮಪಟ್ಟಾಧಿಕಾರ – ಶಿವ ಸಿದ್ದೇಶ್ವರ ಯೋಗ ಪಟ್ಟ

ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ಅವರು, ಚುನಾವಣೆ ಬರುತ್ತಿದ್ದಂತೆ 5 ವರ್ಷಗಳ ನಂತರ ಗ್ರಾಮಕ್ಕೆ ಆಗಮಿಸಿದ್ದೀರಿ. ನಮ್ಮ ಗ್ರಾಮದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದಾಗಿ ಕುಪಿತರಾದ ಮಾಜಿ ಸಚಿವ ಎಂ.ಬಿ. ಪಾಟೀಲ್ ತುಂಬಿದ ಸಭೆಯಲ್ಲೇ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.

Share This Article
Leave a comment