November 22, 2024

Newsnap Kannada

The World at your finger tips!

electic bus , india , prime minister

ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

Spread the love

ಸದ್ಯದಲ್ಲೇ ಕನ್ನಡ ಸೇರಿ ಎಲ್ಲಾ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್, ಇಂಜಿನಿಯರ್ ಶಿಕ್ಷಣ ಪಡೆಯಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ ಅವರು, ಬಡವರನ್ನು ವೋಟ್ ಬ್ಯಾಂಕ್ ಎಂದು ಪರಿಗಣಸಿದ್ದ ದೇಶದ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರ ಬದಲಾಯಿಸಿದೆ.

ಬಡವರ ಮಕ್ಕಳು ಕನ್ನಡದಲ್ಲಿ ವೈದ್ಯಕೀಯ ಓದುವಂತಹ ಸೌಲಭ್ಯಗಳನ್ನು ನಾವು ಕಲ್ಪಿಸಿದ್ದೇವೆ. ಕನ್ನಡ ಮಾತ್ರವಲ್ಲದೆ, ಅನೇಕ ಪ್ರಾಂತೀಯ ಭಾಷೆಗಳಲ್ಲಿ ಮಕ್ಕಳು ಇಂದು ವೈದ್ಯಕೀಯ ವಿಜ್ಞಾನ ಓದುವಂತೆ ನಾವು ಹೊಸ ವ್ಯವಸ್ಥೆಯನ್ನು ಸದ್ಯದಲ್ಲೇ ಎಲ್ಲಾ ಕಡೆಗೂ ತರಲಿದ್ದೇವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾಗಿದೆ. ಇಂತಹ ಜನ್ಮಭೂಮಿಗೆ ಬಂದಿದ್ದು ನನ್ನ ಪುಣ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು. ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ ಎಂದರು.

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ. ಬಡವರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ. ಬಿಜೆಪಿಯವರ ತೊಂದರೆಯನ್ನು ಬಿಜೆಪಿ ಅರಿತು ಅದಕ್ಕೆ ಪರಿಹಾರವನ್ನು ಕಂಡುಹಿಡಿದಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಇದನ್ನು ಓದಿ –ವೈರಮುಡಿ ಉತ್ಸವದ ಸಿದ್ದತೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

Copyright © All rights reserved Newsnap | Newsever by AF themes.
error: Content is protected !!