ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ

Team Newsnap
1 Min Read

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ,ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಹಾಗೂ ಅಲಿಮ್ಕೊ ಸಂಸ್ಥೆ ಸಹಯೋಗದೊಂದಿಗೆ ಮಂಡ್ಯದ ಉತ್ತರ ವಲಯ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಆವರಣದಲ್ಲಿ ವಿಕಲಚೇತನ ಮಕ್ಕಳಿಗೆ ಇದೇ ಜ.18 ರಂದು ವೈದ್ಯಕೀಯ ಮೌಲ್ಯಾಂಕನ ಶಿಬಿರ ಆಯೋಜಿಸಲಾಗಿದೆ.

ಇದನ್ನು ಓದಿ –ಚೆಕ್ ಬೌನ್ಸ್ ಪ್ರಕರಣ: ‘ಮಠ’ ಚಿತ್ರ ನಿರ್ದೇಶಕ ಗುರುಪ್ರಸಾದ್ ಬಂಧನ

ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಸದರಿ ಶಿಬಿರದಲ್ಲಿ ಮಂಡ್ಯ ಉತ್ತರ ವಲಯ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1-12 ನೇ ತರಗತಿ ಮಕ್ಕಳಲ್ಲಿ ಶ್ರವಣದೋಷ,ದೃಷ್ಟಿದೋಷ ಮತ್ತು ದೈಹಿಕ ನ್ಯೂನತೆಯುಳ್ಳ ಮಕ್ಕಳು ಮಾತ್ರ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಲು ಮಂಡ್ಯ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ಸೌಭಾಗ್ಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಜಿ.ಆರ್.ಶಿವರಾಮು ರವರು ವ್ಯಾಪ್ತಿಯ ಮುಖ್ಯಶಿಕ್ಷಕರು ಹಾಗೂ ಪೋಷಕರಿಗೆ ಕೋರಿದ್ದಾರೆ .

Share This Article
Leave a comment