ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತು

Team Newsnap
1 Min Read

ಬೆಂಗಳೂರು:

ಸರ್ಕಾರಿ ವೈದ್ಯರಾಗಿದ್ದರೂ ಓಪಿಡಿ, ಮಾತ್ರೆ ,ಕೊನೆಗೆ ಸೂಜಿ ಚುಚ್ಚಲೂ ದುಡ್ಡು ಎಂಬಂತೆ ಲಂಚಬಾಕ ತನ ಪ್ರದರ್ಶನ ಮಾಡಿದ ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕೋಮಲಾ ಅಮಾನತು ಗೊಳಿಸಲಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಆದೇಶದಲ್ಲಿ ಡಾ|| ಕೋಮಲ ಕೆ.ಪಿ., ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಂತಿನಗರ, ಮೈಸೂರು, ಮೈಸೂರು ಜಿಲ್ಲೆ ಇವರು ರೋಗಿಗಳಿಗೆ ಚಿಕಿತ್ಸೆ ಹಾಗೂ ಔಷಧಿಗಳನ್ನು ನೀಡಲು ಹಣ ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುತ್ತದೆ ಎಂದು ತಿಳಿಸಿದ್ದಾರೆ.

ವೈದ್ಯರು ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳಿಂದ ಹಣ ಪಡೆದಿರುವ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ವರದಿಯನ್ನು ಪರಿಶೀಲಿಸಿ ಸರ್ಕಾರದಿಂದ ಸಾರ್ವಜನಿಕರಿಗೆ ಉಚಿತವಾಗಿ ಔಷಧಿ ಮತ್ತು ಪರಿಕರಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಎ.ಬಿ.ಎ.ಆರ್.ಕೆ ಅಡಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ್ದರೂ ಸಹ ವೈದ್ಯರು ಚಿಕಿತ್ಸೆಗೆ ಬರುವ ರೋಗಿಗಳಿಂದ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮೈಸೂರು ಇವರು ವರದಿಯನ್ನು ಸಲ್ಲಿಸಿ, ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿರುತ್ತಾರೆ ಎಂದಿದ್ದಾರೆ.

ವೈದ್ಯರು ಚಿಕಿತ್ಸೆ ನೀಡಲು ರೋಗಿಗಳಿಂದ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ. ಇವರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಇವರ ಈ ವರ್ತನೆಯಿಂದ ಸಾರ್ವಜನಿಕರಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಇಲಾಖೆಯ ಬಗ್ಗೆ ಖುಣಾತ್ಮಕ ಅಭಿಪ್ರಾಯವುಂಟಾಗಿರುತ್ತದೆ. ಇವರು ಸರ್ಕಾರಿ ವೈದ್ಯರಿಗೆ ತಕ್ಕದಲ್ಲದ ರೀತಿಯಲ್ಲಿ ವರ್ತಿಸಿ ದುರ್ನಡತೆ ಎಸಗಿರುತ್ತಾರೆ. ಇವರ ಕರ್ತವ್ಯಲೋಪ ಹಾಗೂ ದುರ್ನಡತೆಯನ್ನು ಗಂಭೀರವಾಗಿ ಪರಿಗಣಿಸಿ, ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಬಾಕಿಯಿರಿಸಿ ಸೇವೆಯಿಂದ ಅಮಾನತ್ತುಗೊಳಿಸಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

Share This Article
Leave a comment