ಕುಡಿದ ಮತ್ತಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪುನೀತ್ ಗಾಯಗೊಂಡ ವಿದ್ಯಾರ್ಥಿ. ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ.
ಈತ ಕುಡಿದ ಮತ್ತಿನಲ್ಲಿ ಕಿಮ್ಸ್ ಆವರಣದಲ್ಲಿನ ಆನಂದ ಹಾಸ್ಟೆಲ್‌ನ ಎರಡನೆಯ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.
ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಈತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸುವ ಸಲುವಾಗಿ ವೈದ್ಯರು ಸಮಾಲೋಚನೆ ನಡೆಸಿದ್ದಾರೆ.
ಈ ಘಟನೆಯ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ