ಮೇಕೆದಾಟು ಅರ್ಜಿ ವಿಚಾರಣೆ ಜ. 25 ಕ್ಕೆ ಮತ್ತೆ ಮುಂದೂಡಿದ ಸುಪ್ರೀಂ

Team Newsnap
1 Min Read
Mekedatu Dam

ಮೇಕೆದಾಟು ಆಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ.

ಈ ಪ್ರಕರಣ ವಿಚಾರಣೆಯನ್ನು ಜನವರಿ 25ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.

ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಆಣೆಕಟ್ಟು ಸುರಕ್ಷತೆ ಸಂಬಂಧಿಸಿದ ಪ್ರಕರಣವೊಂದರ ಜೊತೆಗೆ ಸುಪ್ರೀಂಕೋರ್ಟ್ ಟ್ಯಾಗ್ ಮಾಡಿತ್ತು.

ಮಂಗಳವಾರ ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಪರ ವಾದ ಮಂಡಿಸಿದ ವಕೀಲರು ಮುಲ್ಲೈ ಪೆರಿಯಾರ್ ಮತ್ತು ಮೇಕೆದಾಟಿಗೂ ಯಾವುದೇ ಸಂಬಂಧ ಇಲ್ಲ ಎರಡು ಅರ್ಜಿಗಳು ಪ್ರತ್ಯೇಕ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು.

ಮುಖ್ಯ ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಎನ್‍ಜಿಟಿ ಆದೇಶವೊಂದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕಾಮಗಾರಿ ಪರಿಶೀಲನೆಗೆ ಸಮಿತಿ ರಚಿಸಿ ಚೆನ್ನೈ ಹಸಿರು ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಅದಕ್ಕೂ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ತಮಿಳುನಾಡು ಪ್ರಶ್ನಿಸಿದೆ.

Share This Article
Leave a comment