ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನವದೆಹಲಿಗೆ ತೆರಳಲಿದ್ದಾರೆ.
ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ
ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು.
ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾಡಾ ಹಾಗೂ ವಾಲ್ಮಿ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆಧುನಿಕ ಮತ್ತು ಸಾವಯವ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ