ಮೇಕೆದಾಟು ಯೋಜನೆ ಜಾರಿ ಒತ್ತಾಯಿಸಲು ಕೇಂದ್ರ ಕ್ಕೆ ನಿಯೋಗ – ಸಚಿವ ರಮೇಶ್ ಜಾರಕಿಹೊಳಿ‌

Team Newsnap
1 Min Read

ರಾಮನಗರ ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಸೋಮವಾರ ತಿಳಿಸಿದರು.

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ., ಪರಿಸರ ಮತ್ತು ಅರಣ್ಯ ಇಲಾಖೆಗಳ ಅನುಮತಿಗಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

23c5331d 5305 4682 94bd 315722fde454

ಮೇಕೆದಾಟು ಅಣೆಕಟ್ಟನ್ನು 9000 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ವಾಸ್ತವ ಅಂಶಗಳ ಮನವರಿಕೆಗಾಗಿ ಮತ್ತು ತ್ವರಿತ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ‌ ಒತ್ತಡ ಹೇರುವ ದೃಷ್ಟಿಯಿಂದ ದೆಹಲಿಗೆ ತೆರಳುವುದಾಗಿ ಸಚಿವರು ಹೇಳಿದರು.

ಸಚಿವ ಜಾರಕಿಹೊಳಿ‌ ಪರಿವೀಕ್ಷಣೆ ನಡೆಸಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಎಂ ಎಲ್ ಸಿ ಸಿಪಿ ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು

Share This Article
Leave a comment