ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ಬಿಜೆಪಿ ಸಿಎಂ ಸ್ಟ್ಯಾಲಿನ್ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ತಿಳಿಸಿದರು.
ತಮಿಳುನಾಡಿ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ತಮಿಳುನಾಡು ಬಿಜೆಪಿ, ತಮಿಳುನಾಡು ಸರ್ಕಾರದ ಜೊತೆಗೆ ನಿಲ್ಲುತ್ತದೆ ಎಂದಿದ್ದಾರೆ.
ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ನಾವು ಸಂಪೂರ್ಣ ಸ್ಪಷ್ಟವಾಗಿದ್ದೇವೆ.. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವೇ ಆಡಳಿತದಲ್ಲಿದ್ದರೂ ಸಹ ತಮಿಳುನಾಡು ಬಿಜೆಪಿ ತಮಿಳುನಾಡು, ಜನರು, ರೈತರ ಹಿತರಕ್ಷಣೆಯ ಪರವಾಗಿ ನಿಲ್ಲುತ್ತದೆ. ಈ ವಿಚಾರದಲ್ಲಿ ನಾವು ಸ್ಪಷ್ಟ ನಿಲುವು ಹೊಂದಿದ್ದೇವೆ ಎಂದಿದ್ದಾರೆ.
ತಮಿಳುನಾಡು ರೈತರು ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ಪಡೆಯಲೇಬೇಕೆಂದಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಸ್ಟಾಲಿನ್ ನಡೆಸಿದ ಸರ್ವಪಕ್ಷ ಸಭೆಯಲ್ಲಿ ಪಕ್ಷದ ಇಬ್ಬರು ಹಿರಿಯ ನಾಯಕರು ಭಾಗವಹಿಸಿದ್ದರು. ಹಾಗೂ ಪಕ್ಷ ಮೇಕೆದಾಟು ವಿಚಾರದಲ್ಲಿ ಸರ್ಕಾರದ ಪರವಾಗಿರಲಿದೆ ಎಂದಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ