ಇಂದು ಮೇಲುಕೋಟೆ ವೈರಮುಡಿ ಉತ್ಸವ

Team Newsnap
1 Min Read

ಮಂಡ್ಯ : ಇಂದು ರಾತ್ರಿ ಮೇಲುಕೋಟೆಯಲ್ಲಿ ವೈರಮುಡಿ ಉತ್ಸವ ನಡೆಯಲಿದ್ದು ,ಲಕ್ಷಾಂತರ ಭಕ್ತರು ಕಣ್ತುಂಬಿಕೊಳ್ಳಲಿದ್ದಾರೆ.

ರಾತ್ರಿ 8:30ಕ್ಕೆ ಸಲ್ಲುವ ಆಶ್ಲೇಷ ನಕ್ಷತ್ರದಲ್ಲಿ ವೈರಮುಡಿ ಉತ್ಸವಕ್ಕೆ ಚಾಲನೆ ಸಿಗಲಿದ್ದು,ವೈರಮುಡಿ ಉತ್ಸವ ನೋಡಲು 2 ಲಕ್ಷ ಭಕ್ತರು ಸೇರುವ ನಿರೀಕ್ಷೆ ಇದೆ.

ಈಗಾಗಲೇ ತಮಿಳುನಾಡು, ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿ ,ವಿಜೃಂಭಣೆಯ ಉತ್ಸವಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ವೈರಮುಡಿ ಆಭರಣ ಇರುವ ವಾಹನ ಹಾದು ಹೋಗಲಿದ್ದು, ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು, ಪಾಂಡವಪುರ, ಜಕ್ಕನಹಳ್ಳಿ ಮಾರ್ಗವಾಗಿ ಮೇಲುಕೋಟೆಗೆ ಆಭರಣದ ವಾಹನ ತಲುಪಲಿದೆ.ಒಂದೇ ಕುಟುಂಬದಲ್ಲಿ ಮೂವರು ಆತ್ಮಹತ್ಯೆಗೆ ಶರಣು

ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ ಮೂರ್ತಿಗೆ ಕಿರೀಟ ಧಾರಣೆ ಮಾಡಿ ಉತ್ಸವಕ್ಕೆ ಚಾಲನೆ ನೀಡಿ ,ನಂತರ ಮೇಲುಕೋಟೆಯ ಪ್ರಮುಖ ಬೀದಿಗಳಲ್ಲಿ ವೈರಮುಡಿ ಉತ್ಸವ ನಡೆಯಲಿದೆ.

Share This Article
Leave a comment