ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಸ್ಮಾರಕವನ್ನು ಸೊರಬ ಪಟ್ಟಣದಲ್ಲಿ ನಿರ್ಮಿಸಲು 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಂಗಾರಪ್ಪ ಅವರ 87ನೇ ಜನ್ಮ ಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ್ನು ಶಿವಮೊಗ್ಗದಿಂದ ಆನ್‍ಲೈನ್ ಮೂಲಕವೇ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಸಿಎಂ, ಸಮಾಜಮುಖಿ ಚಿಂತನೆಯ ನಾಯಕ ಬಂಗಾರಪ್ಪ ಜಾರಿಗೊಳಿಸಿದ ಜನಪರ, ದೂರದೃಷ್ಟಿಯ ಯೋಜನೆಗಳ ಫಲವಾಗಿ ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಗಳು ಜನರ ಮನದಲ್ಲಿ ಇಂದಿಗೂ ಚಿರಸ್ಥಾಯಿಯಾಗಿವೆ. ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ್ದರು ಎಂದರು.
ಕೋವಿಡ್ ಸಂಕಷ್ಟದ ಮಧ್ಯೆಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳನ್ನೂ ಸಮಾನವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ