December 19, 2024

Newsnap Kannada

The World at your finger tips!

WhatsApp Image 2022 06 04 at 8.39.18 AM

ರಾಜಶ್ರೀ ,ಸಾಮಾಜಿಕ ಚಿಂತನೆಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮರಣೆ

Spread the love

ಜೂನ್ 4, 1884ರಲ್ಲಿ ಜನಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕೊಡುಗೆ ಅಪಾರ. ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ 4, 1884 – ಆಗಸ್ಟ್ 3, 1940) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ 24ನೇ ರಾಜರು. ಇವರ ಆಳ್ವಿಕೆ 1902 ರಿಂದ 1940ರವರೆಗೆ ನಡೆಯಿತು.

ನಾಲ್ವಡಿ ಕೃಷ್ಣರಾಜ ಒಡೆಯರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು. ಅವರ ಕಾಲದಲ್ಲಿ, ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ ‘ಪ್ರಜಾ ಪ್ರತಿನಿಧಿ ಸಭೆ’ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಇದರ ಜೊತೆಗೆ ‘ನ್ಯಾಯ ವಿಧಾಯಕ’ ಸಭೆಯನ್ನೂ ಸಹ ಸ್ಥಾಪಿಸಲಾಯಿತು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು.

ಇದನ್ನು ಓದಿ – ವಿಶ್ವ ಪರಿಸರ ದಿನಾಚರಣೆ: ಬಿಬಿಎಂಪಿ ಅರಣ್ಯ ಘಟಕ ವತಿಯಿಂದ ಉಚಿತ ಸಸಿ ವಿತರಣೆ

ಕನ್ನಂಬಾಡಿ ಅಣೆಕಟ್ಟು ನಿರ್ಮಾಣದ ಹಂತದಲ್ಲಿ ಆರ್ಥಿಕ ಸಂಕಷ್ಟ ಎದುರಾದಾಗ ತಮ್ಮ ತಾಯಿಯ ಮತ್ತು ಪತ್ನಿಯ ವಜ್ರ ವೈಢೂರ್ಯಗಳನ್ನು ಮಾರಿ ರೈತರ ಬದುಕಿಗೆ ಬೆಳಕಾಗಿ ನಿಂತರು.ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. 1906 ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು. ನಾಲ್ವಡಿ ಕೃಷ್ಣರಾಜರ ಮತ್ತೊಂದು ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದುದು. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 270 ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು. ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು.

ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. 1906 ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.1907 ರಲ್ಲಿ ‘ವಾಣೀವಿಲಾಸ ಸಾಗರ’ (ಮಾರಿ ಕಣಿವೆ) ಕಟ್ಟಲ್ಪಟ್ಟಿತು, 1911 ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. 1900ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು, ಇದು ಭಾರತದ ಮೊದಲ ಬೃಹತ್ ಜಲ ವಿದ್ಯುತ್ ಕೇಂದ್ರ.

ಮೈಸೂರು ಬೆಂಗಳೂರು ಪ್ರದೇಶಗಳಂತಹ ನಗರಗಳಲ್ಲಿ ರಚಿತವಾದ ಶ್ರೇಷ್ಠ ಕಟ್ಟಡಗಳು, ರಸ್ತೆಗಳು, ವಿದ್ಯುತ್ ದೀಪಗಳು, ಉದ್ಯಾನವನಗಳು, ಜಲ ಕಾರಂಜಿಗಳು, ವಿಹಾರಿ ಧಾಮಗಳು, ಶ್ರೇಷ್ಠ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳು, ಅನಾಥಾಶ್ರಮಗಳು, ಛತ್ರಗಳು, ಶುಲ್ಕ ವಿಧಿಸದೆ ಉತ್ತಮ ಸೇವೆ ನೀಡುತ್ತಿದ್ದ ಆಸ್ಪತ್ರೆಗಳು, ಶುಶ್ರೂಷಾ ಧಾಮಗಳು, ಸಂಪರ್ಕ ವ್ಯವಸ್ಥೆಗಳು, ಪ್ರಯಾಣ ಸೌಲಭ್ಯಗಳು ಬಹುಷಃ ಇಷ್ಟು ಶ್ರೇಷ್ಠ ಮಟ್ಟದಲ್ಲಿದ್ದುದು ನಾಲ್ವಡಿ ಕೃಷ್ಣ ರಾಜ ಒಡೆಯರ್ ಕಾಲದಲ್ಲಿ.

ಈ ಪ್ರಾಂತ್ಯದಲ್ಲಿದ್ದ ಸರ್ವ ಭಾಷಿಗರ ಸಮನ್ವಯ, ಸರ್ವ ಧರ್ಮೀಯರ ಸಮನ್ವಯ, ಎಲ್ಲಾ ವರ್ಗದವರ ಹಿತಕಾಯುವ ಮನೋಭಾವ ಇತ್ಯಾದಿಗಳು ಸಾರ್ವಕಾಲಿಕವಾಗಿ ಮಹೋನ್ನತವಾದ ಗಳಿಗೆಗಳು. ಈ ಸಂಸ್ಥಾನದಲ್ಲಿ ಕಲೆ, ಸಂಗೀತ, ಸಾಹಿತ್ಯ ಮತ್ತು ಸಂಸ್ಕೃತಿಗಳ ಪೋಷಣೆ ಅದ್ವಿತೀಯವಾಗಿತ್ತು.ಇದನ್ನೆಲ್ಲ ಕಂಡೇ ಮಹಾತ್ಮ ಗಾಂಧೀಜಿಯವರು ಮೈಸೂರನ್ನು ‘ರಾಮರಾಜ್ಯ’ ಎಂದು ಕರೆದರು. ನಾಲ್ವಡಿ ಕೃಷ್ಣರಾಜ ಒಡೆಯರ್​ರನ್ನು ‘ರಾಜರ್ಷಿ’ ಎಂದು ಶ್ಲಾಘಿಸಿದರು.

Copyright © All rights reserved Newsnap | Newsever by AF themes.
error: Content is protected !!