January 10, 2025

Newsnap Kannada

The World at your finger tips!

kinnathe

ಮಾನಸಿಕ ಖಿನ್ನತೆ : ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ

Spread the love

ನಿವೃತ್ತ ಪೊಲೀಸ್​ ಅಧಿಕಾರಿಯೊಬ್ಬರು
ಮಾನಸಿಕ ಖಿನ್ನತೆಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿವೃತ್ತ ಡಿವೈಎಸ್​​ಪಿ ಹನುಮಂತಪ್ಪ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯನಗರದ ಎಂಸಿ ಲೇಔಟ್​​ನ ತಮ್ಮ ನಿವಾಸದಲ್ಲಿ ಹನುಮಂತಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್​​ಪೆಕ್ಟರ್ ಆಗಿದ್ದರು. ಯಶವಂತಪುರದಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸಿದ್ದರು.

ಬ್ಲಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಹನುಮಂತಪ್ಪ, ಅದರಿಂದ ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!