ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ಪ್ರೇಮ್ ಕುಮಾರ್ ಅವರನ್ನು ಅಡ್ಡಗಟ್ಟಿ 1.8 ಲಕ್ಷ ರು ಸುಲಿಗೆ ಮಾಡಿಕೊಂಡು ದರೋಡೆಕೊರರು ಪರಾರಿ ಆಗಿದ್ದಾರೆ.
ಬಂಡಿ ಪಾಳ್ಯದ ಮಾತಾಜಿ ಟ್ರೆಡಿಂಗ್ ಅಂಗಡಿ ಮಾಲೀಕ ಪ್ರೇಮ್ ಬುಧವಾರ ರಾತ್ರಿ ವ್ಯಾಪಾರ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪ್ರೇಮ್ ನನ್ನು ಅಡ್ಡಗಟ್ಟಿದ ಇಬ್ಬರು ಸುಲಿಗೆಕೋರರು, ವ್ಯಾಪಾರಿ ಬಳಿ ಇದ್ದ 1.8 ಲಕ್ಷ ರು. ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರದ ದಳವಾಯಿ ಶಾಲೆ ಬಳಿ ನಡೆದಿದೆ.
ಈ ಖದೀಮರು, ದಳವಾಯಿ ಶಾಲೆ ಬಳಿ ಸ್ಕೂಟರ್‌ನಲ್ಲಿ ಅಡ್ಡ ಹಾಕಿ, ‘ನಮ್ಮ ಮೇಲೆ ಏಕೆ ಉಗಿದೆ’ ಎಂದು ಜಗಳ ತೆಗೆದು ಸ್ಕೂಟರ್‌ನಿಂದ ಆತನನ್ನು ಕೆಳಗೆ ಬೀಳಿಸಿದ್ದಾರೆ. ರಸ್ತೆ ಬದಿಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.
ಮತ್ತೊಬ್ಬ ಸ್ಕೂಟರ್‌ನ ಕೀ ತೆಗೆದುಕೊಂಡು ಡಿಕ್ಕಿಯಲ್ಲಿ ಇರಿಸಿದ್ದ 1.8 ಲಕ್ಷ ರು ಎತ್ತಿಕೊಂಡ ಹಲ್ಲೆ ಮಾಡಿದ್ದಾನೆ. ಬಳಿಕ ಇಬ್ಬರು ಸುಲಿಗೆಕೋರರು, ಆತನನ್ನು ಅಲ್ಲೇ ತಳ್ಳಿ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಕೆ.ಆರ್. ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿ ರುವುದನ್ನು ಗಮನಿಸಿದ್ದಾರೆ. ಪೊಲೀಸರು ದೂರು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ