ಕೇಂದ್ರ ಸರ್ಕಾರ ಬೆಂಗಳೂರಿನ 1 ಮತ್ತು 2 ನೇ ಹಂತದ ಮೆಟ್ರೋ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿರುವುದು ರಾಜ್ಯಕ್ಕೆ ನೀಡಿರುವ ಭಿಕ್ಷೆ ಅಲ್ಲ. ಆದರೆ ಈ ರಾಜ್ಯ ಸರ್ಕಾರ, ಕೇಂದ್ರಕ್ಕೆ ಕೃತಜ್ಞತೆ ರೂಪದಲ್ಲಿ ಕೋಟ್ಯಾಂತರ ರು. ಖರ್ಚು ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಕೊರೋನಾ ಎರಡನೇ ಅಲೆ ಭೀಕರತೆಯಿಂದ ಜನ ಸಾಯುತ್ತಿರುವಾಗ ಅಗ್ಗದ ಪ್ರಚಾರಕ್ಕೆ ಈ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ಜಾಹೀರಾತು ನೀಡಿರುವುದರ ವಿರುದ್ದ ಮಾಜಿ ಮುಖ್ಯಮಂತ್ರಿ ಗಳು ಅಸಮಾಧಾನ ವ್ಯಕ್ತಪಡಿಸಿದರು.
ಇದೊಂದು ಮೂರ್ಖ ಸರ್ಕಾರ:
ರಾಜ್ಯದಲ್ಲಿ ಕೊರೋನಾ ಹಾವಳಿಯಿಂದ ಅಮಾಯಕರು, ಬಡವರು ಆ್ಯಕ್ಸಿಜನ್ , ಬೆಡ್, ಔಷಧಿ ಒಲ್ಲದೇ ಸಾಯುತ್ತಿದ್ದಾರೆ. ಈ ಮೂರ್ಖ ಸರ್ಕಾರ ಅಗ್ಗದ ಪ್ರಚಾರಕ್ಕೆ ಕೋಟಿ, ಕೋಟಿ ಹಣ ಖರ್ಚು ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿ ಇದೊಂದು ಮೂರ್ಖ ಸರ್ಕಾರ ಎಂದು ಕಟುವಾಗಿ ಟೀಕಿಸಿದ್ದಾರೆ.
ಜನರ ನೋವು , ಸಮಸ್ಯೆಗಳಿಗೆ ಸ್ಪಂದಿಸಿ, ಕೊರೋನಾ ಸಾವುಗಳನ್ನು ತಡೆಯಲು ಮುಂದಾಗಿ. ಹುಚ್ಚು ತೋರಿ ಪ್ರಚಾರದ ಗಿಮಿಕ್ ಗೆ ಹಣ ಸರ್ಕಾರದ ಖಜಾನೆ ಖಾಲಿ ಮಾಡುವ ಬದಲು ಉತ್ತಮ ಕೆಲಸಗಳನ್ನು ಮಾಡಿ ಎಂದು ಸಲಹೆ ನೀಡಿದ್ದಾರೆ.
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ