ಅರಮನೆ ನಗರಿ ಎಂದು ಹೆಸರಾಗಿರುವ ಮೈಸೂರು ನಗರಕ್ಕೆ ಮೆಟ್ರೋ ನಿಯೋ ಅಥವಾ ಮೆಟ್ರೋ ಲೈಟ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ಇದರಡಿ 18 ರಿಂದ 25 ಮೀಟರ್ ಉದ್ದದ ಬಸ್‌ಗಳು ಸಂಚರಿಸುತ್ತವೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ)ದ ಅಧ್ಯಕ್ಷ ಎಚ್.ವಿ. ರಾಜೀವ್ ಹೇಳಿದ್ದಾರೆ.
ಜನಸಂದಣಿ ಇರುವ ಪ್ರದೇಶಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೆಟ್ರೋ ಲೈಟ್ ಅಥವಾ ಮೆಟ್ರೋ ನಿಯೋ ಯೋಜನೆ ಇದಾಗಿದ್ದು, ದೇಶದ ಟು ಟೈಯರ್ ಸಿಟಿಗಳಲ್ಲಿ ಜಾರಿಗೆ ತರಲಾಗುತ್ತದೆ. ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಅನುಷ್ಠಾನಗೊಳಿಸಲಾಗುತ್ತದೆ.
ದಕ್ಷಿಣ ಭಾರತದ ಪೈಕಿ ಮೈಸೂರು ಈ ಯೋಜನೆ ಜಾರಿಗೊಳಿಸಿದ ಪ್ರಥಮ ನಗರವೆಂಬ ಖ್ಯಾತಿಪಡೆಯಲು ಶ್ರಮಿಸಲಾಗುವುದು ಎಂದರು. ಮೂಡಾ ವತಿಯಿಂದ ಮೈಸೂರಿನಲ್ಲಿ ಗುಂಪು ಮನೆ ಇಲ್ಲವೇ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ