Trending

ಡಿಸಿಯನ್ನು ಮಣಿಸಿದ ಎಮ್‌ಐ

ಐಪಿಎಲ್ 20-20ಯ 49ನೇ ಪಂದ್ಯದಲ್ಲಿ ಡೆಲ್ಲಿ‌ ಕ್ಯಾಪಿಟಲ್ಸ್ ತಂಡಸ ವಿರುದ್ಧ, ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್‌ಗಳ ಅಂತರದಿಂದ ಜಯ ಗಳಿಸಿತು.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ‌ ಎಮ್‌ಐ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಡಿಸಿ ತಂಡದಿಂದ ಓಪನಿಂಗ್ ಬ್ಯಾಟ್ಸ್‌ಮನ್‌ಗಳಾಗಿ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಫೀಲ್ಡಿಗಿಳಿದರು. ಆದರೆ ಆಟದ ಆರಂಭ ಉತ್ತಮವಾಗಿರಲಿಲ್ಲ. ಶಾ 11 ಬಾಲ್‌ಗಳಿಗೆ 10 ರನ್ ಗಳಿಸಿದರೆ, ಧವನ್ ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ನಂತರ ಬಂದ ತಂಡದ ನಾಯಕ ಎಸ್‌. ಐಯ್ಯರ್ 29 ಬಾಲ್‌ಗಳಿಗೆ 25 ರನ್ ಹಾಗೂ 24 ಬಾಲ್‌ಗಳಿಗೆ 21 ರನ್ ಗಳಿಸಿದರು. ಒಟ್ಟಾರೆಯಾಗಿ ಡಿಸಿ ಪ್ರದರ್ಶನ ಕಳಪೆಯಿಂದ ಕೂಡಿತ್ತು. ಡಿಸಿ ತಂಡ‌ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 110 ರನ್‌‌ ಮಾತ್ರ ಗಳಿಸಿತು.

ಇತ್ತ ಡಿಸಿ ಆಟಕ್ಕೆ ಪ್ರತಿಯಾಗಿ ಎಮ್‌ಐ ತಂಡದಿಂದ ಮೈದಾನಕ್ಕೆ ಆರಂಭಿಕ ಆಟಗಾರರಾಗಿ ಐ. ಕಿಶನ್ ಹಾಗೂ ಡಿ. ಕಾಕ್ ಎಂಟ್ರಿ ನೀಡಿದರು. ಕಿಶನ್ 47 ಬಾಲ್‌ಗಳಿಗೆ 72 ರನ್ ಹಾಗೂ ಕಾಕ್ 28 ಬಾಲ್‌ಗಳಿಗೆ 26 ರನ್ ಗಳಿಸಿದರು. ಎಮ್‌ಐ ತಂಡ 14.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿ ಪಂದ್ಯದಲ್ಲಿ ಗೆದ್ದಿತು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024