December 22, 2024

Newsnap Kannada

The World at your finger tips!

love,cinema,sandalwood

ಗುಡ್ ನ್ಯೂಸ್ ನೀಡಿದ ಮಿಲನಾ – ಡಾರ್ಲಿಂಗ್ ಕೃಷ್ಣ ದಂಪತಿ

Spread the love

ಮಹಿಳಾ ದಿನಾಚರಣೆ ದಿನದಂದು ನಟಿ ಮಿಲನಾ ನಾಗರಾಜ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು , ಸೆಪ್ಟೆಂಬರ್ ನಲ್ಲಿ ತಮ್ಮ ಮನೆಗೆ ಹೊಸ ಅತಿಥಿ ಬರುತ್ತಿರುವುದಾಗಿ ಬರೆದುಕೊಂಡಿದ್ದಾರೆ.

ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಪ್ರೀತಿಸಿ , ಮನೆಯವರ ಒಪ್ಪಿಗೆ ಪಡೆದುಕೊಂಡು ಮದುವೆಯಾದವರು.ಇಬ್ಬರೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದು ,ಸಿನಿಮಾದಲ್ಲಿ ನಟನೆ, ನಿರ್ಮಾಣ ಮತ್ತು ನಿರ್ದೇಶನವನ್ನೂ ಮಾಡಿದ್ದಾರೆ.

ಇದೀಗ ಜೋಡಿಯು ಹೊಸ ಅತಿಥಿಯ ಆಗಮನಕ್ಕೆ ಕಾಯುತ್ತಿದೆ. ಈ ಖುಷಿಯನ್ನು ಅವರು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

image

ಇದನ್ನು ಓದಿ –ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಮಿಲನಾ ಬೇಬಿ ಕ್ರಿಸ್ಮಿ’ ಎನ್ನುವ ಸುಂದರವಾದ ಪೋಸ್ಟ್ ತಯಾರಿಸಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!