ಪುಲ್ವಾಮಾದ ಮಾಜಿ ಪೊಲೀಸ್ ಅಧಿಕಾರಿ, ಪತ್ನಿ ಮತ್ತು ಪುತ್ರಿಯನ್ನು ಉಗ್ರರು ಹತ್ಯೆ ಮಾಡಿದ್ದಾರೆ.
ಪುಲ್ವಾಮಾದ ಹರಿಪರಿಗಂ ಗ್ರಾಮದಲ್ಲಿರುವ ಮಾಜಿ ಪೊಲೀಸ್ ಅಧಿಕಾರಿಯ ಮನೆಗೇ ನುಗ್ಗಿದ ಉಗ್ರರು ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.
ಮಾಜಿ ಎಸ್ಪಿಒ ಫಯಾಜ್ ಅಹ್ಮದ್ ಮನೆಗೆ ನುಗ್ಗಿದ ಉಗ್ರರು ನಂತರ ಗುಂಡಿನ ದಾಳಿ ನಡೆಸಿದಾಗ ಫಯಾಜ್ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ರಾಜಾ ಬೇಗಂ ಮತ್ತು ಪುತ್ರಿ ರಫಿಯಾ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸೇರಿಸಿದ ಕೆಲವೇ ಹೊತ್ತಲ್ಲಿ ಪತ್ನಿ ರಾಜಾ ಬೇಗಂ ಕೂಡ ಸಾವನ್ನಪ್ಪಿದ್ದಾರೆ.
ಪುತ್ರಿ ರಫಿಯಾಗೆ ಚಿಕಿತ್ಸೆ ಮುಂದುವರಿಸಲಾಗಿತ್ತಾದರೂ ಅವರೂ ಬದುಕಲಿಲ್ಲ. ನಾಪತ್ತೆಯಾದ ಉಗ್ರರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು-ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.
ಈ ಅಧಿಕಾರಿಯ ಪುತ್ರ ಸೈನ್ಯದ ಪ್ರಾದೇಶಿಕ ಪಡೆಯಲ್ಲಿ ಸೈನಿಕನಾಗಿದ್ದಾನೆ. ಎರಡು ವರ್ಷಗಳ ಹಿಂದೆ ಫಯಾಜ್ಗೆ ರಾಜೀನಾಮೆ ನೀಡುವಂತೆ ಒತ್ತಡ ಬಂದಿತ್ತು. ಆದರೆ ಉಗ್ರರ ಒತ್ತಡಕ್ಕೆ ಮಣಿದಿರಲಿಲ್ಲ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment