ಹೆರಿಗೆ ನೋವು ಕಾಣಿಸಿಕೊಂಡಿದ್ದರೂ ಗರ್ಭಿಣಿಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲು ಮಂಡ್ಯ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ನಿರಾಕರಣೆ ಮಾಡಿದ್ದರಿಂದ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ ಆಯ್ತು. ಆದರೆ ಮಗು ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ಜರುಗಿದೆ.
ಮಂಡ್ಯ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಮನಕಲಕುವ ಘಟನೆ ಜರುಗಿದೆ.
ನಿನ್ನೆ ಹೆರಿಗೆಗಾಗಿ ಸೋನು ಎಂಬ ತುಂಬು ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ರಿಪೋರ್ಟ್ ಇಲ್ಲ ಎನ್ನುವ ಕಾರಣಕ್ಕೆ ಸೋನು ಅವರನ್ನು ನಿನ್ನೆ ಅಡ್ಮಿಟ್ ಮಾಡಿಕೊಂಡಿರಲಿಲ್ಲ.
ಬುಧವಾರ ಬೆಳಗ್ಗೆ 6 ಗಂಟೆಯಲ್ಲಿ ನೋವು ಮತ್ತೆ ಕಾಣಿಸಿಕೊಂಡಿದ್ದರಿಂದ ಪೋಷಕರು 8 ಗಂಟೆ ವೇಳಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಈ ವೇಳೆ 2 ಗಂಟೆಯಾದರೂ ಸೋನಳನ್ನು ದಾಖಲು ಮಾಡಿಕೊಳ್ಳದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದರು. ಈ ವೇಳೆ ಆಸ್ಪತ್ರೆ ಮುಂಭಾಗ ನಿಂತಿದ್ದ ಮಹಿಳೆಗೆ ನಿಂತಲ್ಲೇ ಹೆರಿಗೆ ಆಗಿ, ಮಗು ಕೆಳಗೆಬಿದ್ದು ಮಗು ಸಾವನ್ನಪ್ಪಿತು.
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ