Editorial

ಮನಸ್ಸೆಂಬುದು ಅಕ್ಷಯ ಪಾತ್ರೆ..

ಸಂಯಮವಿರಲಿ.ಉದ್ವೇಗ ಒಳ್ಳೆಯದಲ್ಲ.ಭಾವನಾತ್ಮಕ ಪ್ರತಿಕ್ರಿಯೆಯಲ್ಲಿ ಸೂಕ್ಷ್ಮತೆ ಇರಲಿ.
ದ್ವೇಷ ಪ್ರತಿಕಾರಗಳು, ಮಾತು ಅಕ್ಷರಗಳಲ್ಲಿ ಮೂಡುವ ಮುನ್ನ ಹಲವಾರು ಬಾರಿ ಯೋಚಿಸಿ……..
ನಿಂತ ನೆಲದ, ಸುತ್ತಲಿನ ಜನರ ಹಿತಾಸಕ್ತಿ ಮನದಲ್ಲಿರಲಿ. ನಮ್ಮ ಒಟ್ಟು ಪರಿಸ್ಥಿತಿ ಗಮನದಲ್ಲಿರಲಿ.

ಸಹನೆಗೂ ಹೇಡಿತನಕ್ಕೂ ಧೈರ್ಯಕ್ಕೂ ನಡುವಿನ ವ್ಯತ್ಯಾಸ ತಿಳಿದಿರಲಿ…..

ನಮ್ಮ ಸಾಮರ್ಥ್ಯ ಮಿತಿಗಳ ಪುನರಾವಲೋಕನವಾಗಲಿ……..

ಹಲವಾರು ಸಾಧ್ಯತೆಗಳ ವಿಮರ್ಶೆಯಾಗಲಿ……

ಓಟಿನ ಭೇಟೆಯ ಬಗ್ಗೆ ಎಚ್ಚರವಿರಲಿ…..

ಆಂತರಿಕ ಭಿನ್ನಾಭಿಪ್ರಾಯಗಳು ಹೆಚ್ಚಾಗದಿರಲಿ……..

ಶತ್ರುಗಳ ಕುತಂತ್ರಗಳ ಸಂಪೂರ್ಣ ಮಾಹಿತಿಯಿರಲಿ…..

ನಮ್ಮ ನಮ್ಮಲ್ಲಿ ಒಗ್ಗಟ್ಟಿರಲಿ…….

ನಮ್ಮ ಒಳಗಿನ ಆರೋಪ ಪ್ರತ್ಯಾರೋಪಗಳಿಗೆ ಅಲ್ಪ ವಿರಾಮ ನೀಡಿ……..

ಯುದ್ಧ, ಶಾಂತಿ, ಸಂಧಾನ,
ಅವುಗಳ ದೀರ್ಘ ಪರಿಣಾಮದ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಮಾಡಿ…..

ಹುಚ್ಚರು, ಉಡಾಫೆಯವರು ಮತ್ತು ಸಾಮಾನ್ಯರ ನಡುವಿನ ಅಂತರದ ತೀರ್ಮಾನ ಯೋಚಿಸಿ ನಿರ್ಧರಿಸಿ…..

ಮಾತಿನ ದೇಶಭಕ್ತಿಗೂ,
ಮನಸ್ಸಿನ ದೇಶಪ್ರೇಮಕ್ಕೂ,
ಹೃದಯದ ದೇಶ ಪ್ರೀತಿಗೂ,
ನಡುವಿನ ವ್ಯತ್ಯಾಸದ ಅರಿವಿರಲಿ.

ಬೃಹತ್ ವೈವಿಧ್ಯಮಯ ಶಾಂತಿ ಪ್ರಿಯ ದೇಶಕ್ಕೂ, ಮತಾಂಧ ಅನಾಗರಿಕ ಚಿಕ್ಕ ದೇಶಕ್ಕೂ ಇರುವ ವ್ಯತ್ಯಾಸ ನಿಮ್ಮ ನೆನಪಿನಲ್ಲಿರಲಿ……..

ಇರುವವರು ಕಳೆದುಕೊಳ್ಳುವರು,
ಇಲ್ಲದವರಿಗೆ ಕಳೆದುಕೊಳ್ಳಲು ಏನೂ ಉಳಿದಿರುವುದಿಲ್ಲ……

ಗೆಲುವಿರಿವುದು ತಾಳ್ಮೆಯಲ್ಲಿಯೇ ಹೊರತು ಆಕ್ರೋಶದಲ್ಲಿಯಲ್ಲ……

ಯಶಸ್ವಿಯಾಗುವುದು ವಿವೇಚನೆಯಿಂದಲೇ ಹೊರತು ಕೋಪದಿಂದಲ್ಲ.

ಈ ದೇಶ ಈ ಜನರೊಂದಿಗೆ ಎಲ್ಲಾ ಕಾಲಕ್ಕೂ, ಎಲ್ಲಾ ‌ಸಂಧರ್ಭದಲ್ಲಿಯೂ ನಾವು ನೀವು………..

ಏಕೆಂದರೆ………….

ಮನಸ್ಸೆಂಬುದು ಅಕ್ಷಯ ಪಾತ್ರೆ……………….

ನನ್ನೊಳಗು ನಿನ್ನೊಳಗು ಎಲ್ಲರೊಳಗೂ,
ಏನಿದೆಯೆಂದು ಕೇಳದಿರು,
ಏನಿಲ್ಲ,

ಅದರ ಆಳ ಅಗಲ ಎತ್ತರಗಳನ್ನು ಬಲ್ಲವರಿಲ್ಲ,
ನಮ್ಮೊಳಗಿನ ಆಗಾಧ ಸಾಮರ್ಥ್ಯವೇ ಮನಸ್ಸು,

ಪ್ರೀತಿ ಪ್ರೇಮ ವಾತ್ಸಲ್ಯಗಳು ತುಂಬಿರುವಂತೆ,
ಕೋಪ ದ್ವೇಷ ಅಸೂಯೆಗಳು ತುಂಬಿವೆ,

ಅದ್ಭುತ ಆಶ್ಚರ್ಯವೆಂದರೆ,
ಅದರ ಆಯ್ಕೆಗಳೂ ನಿನ್ನವೇ,
ಯಾರಿಗುಂಟು ಯಾರಿಗಿಲ್ಲ,

ಸಾವನ್ನು ಸಂಭ್ರಮಿಸುವ ಸ್ವಾತಂತ್ರ್ಯವೂ ನಿನ್ನದೇ,
ಬದುಕನ್ನು ದ್ವೇಷಿಸುವ ಸ್ವಾತಂತ್ರ್ಯವೂ ನಿನ್ನದೇ,

ಕೊರಗೇಕೆ ಓ ಮನುಜ ನೀ ಅಲ್ಪನಲ್ಲ,
ಈ ಸೃಷ್ಟಿಯೂ ನಿನ್ನ ಮನಸ್ಸಿಗಿಂತ ದೊಡ್ಡದಲ್ಲ,
ಸೃಷ್ಟಿಯಾಚೆಗೂ ವಿಸ್ತರಿಸಬಲ್ಲದು ನಿನ್ನೀ ಮನಸು,

ನೀನೇನು ಸಾಮಾನ್ಯನಲ್ಲ, ಅಸಾಮಾನ್ಯ,
ಹೃದಯ ಚಿಕ್ಕದೇ ಇರಬಹುದು,
ಮನಸ್ಸಿನ ಅಗಾಧತೆ ನಿನಗೇ ಅರಿವಿಲ್ಲ,

ಹಾಡಬಲ್ಲೆ, ಬರೆಯಬಲ್ಲೆ, ಓದಬಲ್ಲೆ, ಚಿತ್ರಿಸಬಲ್ಲೆ,
ನೆಗೆಯಬಲ್ಲೆ, ಈಜಬಲ್ಲೆ ,ಹಾರಾಡಬಲ್ಲೆ,

ಇನ್ನೇಕೆ ತಡ, ಕಿತ್ತೊಗೆ ನಿನ್ನ ನಿರಾಸೆ,
ಈ ಕ್ಷಣದಿಂದ ಈ ಮನಸ್ಸು ನಿನ್ನದೇ,
ಅದಕ್ಕೆ ನೀನೇ ಅಧಿಪತಿ,

ಎದ್ದು ಕುಳಿತುಕೋ ನಿನ್ನ ಮನದ ಸಿಂಹಾಸನದ ಮೇಲೆ,
ಆಳು ನಿನ್ನ ಮನಸ್ಸಿನ ಸಾಮ್ರಾಜ್ಯವನ್ನು,
ನಿನಗಿಷ್ಟಬಂದಂತೆ,

ಈಗ ನೀನು ರಕ್ತ ಮೂಳೆ ಮಾಂಸಗಳ ಮುದ್ದೆಯಲ್ಲ,
ನೀನು ನಿನ್ನ ವಿಶಾಲ ಮನಸ್ಸಿನ ಚಕ್ರವರ್ತಿ,
ಎಲ್ಲವೂ ಶರಣಾಗಿದೆ ನಿನ್ನ ಕಾಲ ಬಳಿ,

ಆತ್ಮವಿಶ್ವಾಸದ ಮುಂದೆ ಸೃಷ್ಟಿಯೂ ನಿನ್ನ ಮುಷ್ಟಿಯಲ್ಲಿ…………

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024