ಮಂಡ್ಯ: ಜಿಲ್ಲೆಯ ಕೃಷ್ಣ ರಾಜ ಸಾಗರ ಅಂದರೆ ಕೆ ಆರ್ ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ಕುರಿತಂತೆ ಮಂಡ್ಯ ಜಿಲ್ಲಾಡಳಿತದಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. KRS ಸುತ್ತಮುತ್ತ 20 ಕಿ.ಮೀ.
ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ನಿಷೇಧಿಸಿರೋದಾಗಿ ತಿಳಿಸಿದೆ.
ಜನವರಿ 8ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್ ಆದೇಶದಂತೆ ಸಾರ್ವಜನಿಕ ಪ್ರಕಟಣೆಯನ್ನು ಮಂಡ್ಯ ಜಿಲ್ಲಾಡಳಿತದಿಂದ ಇಂದು ಹೊರಡಿಸಲಾಗಿದೆ.
ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ, ಗಣಿಗಾರಿಕೆ ಸಂಬಂಧಿತ ಚಟುವಟಿಕೆ ನಿಷೇಧಿಸಿ ಕೋರ್ಟ್ ಆದೇಶ ಮಾಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕಟಣೆ ಹೊರಡಿಸಿ, ಕೋರ್ಟ್ ಆದೇಶ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳಲಾಗಿದೆ.‘ತಮಿಳಗ ವಿಟ್ರಿ ಕಜಂ’: ತಮಿಳು ನಟ ವಿಜಯ್ ಸಾರಥ್ಯದ ಹೊಸ ಪಕ್ಷ ಉದಯ
ಎಲ್ಲರೂ ಕೋರ್ಟ್ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆಯನ್ನು ನೀಡಲಾಗಿದೆ. ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ