ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಾಲೂಕುಗಳ ತಹಶೀಲ್ದಾರರು ಜಿಲ್ಲೆಯ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮಗಳಿಗೆ ಅಧಿಕಾರಿ ವರ್ಗವನ್ನೇ ಕಳಿಸುವ ವಿನೂತನ ಯೋಜನೆಗೆ ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ (ಇಂದು) ರಾಜ್ಯ ಸರ್ಕಾರದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸಚಿವರು ಆ ಗ್ರಾಮದಲ್ಲಿಯೇ 24 ಗಂಟೆಗಳ ಕಾಲ ತಂಗಲಿದ್ದಾರೆ. ಖುದ್ದು ಸಮಸ್ಯೆಯನ್ನು ಆಲಿಸಲಿದ್ದಾರೆ.
ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂಧಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ರಾಜ್ಯಸರ್ಕಾರವು ಈ ನೂತನ ಗ್ರಾಮವಾಸ್ತವ್ಯದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಮಾರ್ಗಸೂಚಿಗಳನ್ನು ನೀಡಿದೆ.
ಗ್ರಾಮ ವಾಸ್ತವ್ಯದ ಉದ್ದೇಶ ಏನು?:
- ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ವಾಸ್ತವ್ಯ ದ ವೇಳೆ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು.
- ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು.
- ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು.
- ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶಕ್ಕೆ ಕ್ರಮ
- ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸುವುದು.
- ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು.
- ಆಧಾರ ಕಾರ್ಡಿನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.
- ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು.
- ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ ಮತ್ತು ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು.
- ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗೃತೆ ಕ್ರಮವಹಿಸುವುದು.
- ಹದ್ದು ಬಸ್ತು, ಪೋಡಿ ಮುಕ್ತಗ್ರಾಮ, ದರಕಾಸ್ತು ಪೋಡಿ, ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿ ಎಸ್.ಸಿ., ಎಸ್.ಟಿ., ಬಿ.ಸಿ.ಎಂ. ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮ ವಹಿಸುವುದು.
- ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು.
- ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಆದೇಶಿಸುವುದು,
- ಗುಡಿಸಲು ರಹಿತ ವಾಸದ ನಿರ್ಮಾಣ ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನ ನೀಡುವುದು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ