ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ನೀಡಿದ ಸಚಿವ ಅಶ್ವಥ್ ನಾರಾಯಣ್

Team Newsnap
1 Min Read
High Court stays against FIR on former minister Ashwath Narayan ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ದದ FIR ಗೆ ಹೈಕೋರ್ಟ್ ತಡೆ

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ನಡೆಯಲಿದೆ ಎಂಬ ಸುಳಿವನ್ನು ಸಚಿವ ಅಶ್ವಥ್ ನಾರಾಯಣ್ ಬಿಟ್ಟುಕೊಟ್ಟಿದ್ದಾರೆ. ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ, ಪರಿಸ್ಥಿತಿಗೆ ಅನುಗುಣವಾಗಿ ಯಾರ‍್ಯಾರು ಬರುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅಶ್ವತ್ಥ್ ನಾರಾಯಣ ಅವರು, ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದರು.

ಉತ್ತರಪ್ರದೇಶದಲ್ಲಿನ ಹಿಂಸಾಚಾರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಇದು ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನಲ್ಲಿ ಎ ಟೀಂ, ಬಿ ಟೀಂ ಎನ್ನುವ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇದೆ. ಹೀಗಾಗಿ ಸಹಜವಾಗಿ ಗೆಲುವು ಸಿಕ್ಕಿದೆ ಎಂದಿದ್ದಾರೆ.

Share This Article
Leave a comment