ಮೈಸೂರು : ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಖಂಡ್ರೆ ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರಿತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯವಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಈ ವಲಯದಲ್ಲಿ ಹೆಚ್ಚಿನ ಸಸ್ಯಗಳನ್ನು ನೀಡುವಂತೆ ಸೂಚಿಸಿದರು.
ದಿನಗೂಲಿ ನೌಕರರಿಗೆ ಅದರಲ್ಲೂ ಹೊರಗುತ್ತಿಗೆಯ ನೌಕರರಿಗೆ ವೇತನ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ ಅಂತಹ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡು ಬಡ ನೌಕರರಿಗೆ ಸಕಾಲದಲ್ಲಿ ಸಂಬಳ ಕೈ ಸೇರುವಂತೆ ಕ್ರಮವಹಿಸಲು ಸೂಚಿಸಿದರು.
ದಸರಾ ಆನೆ ಆಯ್ಕೆ:
ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಆನೆಗಳೆ ಪ್ರಧಾನ ಆಕರ್ಷಣೆಯಾಗಿದೆ, ಈ ಬಾರಿಯ ದಸರಾ ಮಹೋತ್ಸವಕ್ಕೆ 14 ಆನೆಗಳನ್ನು ಎಲ್ಲಾ ಮಾನದಂಡಗಳನ್ನು ಅನುಸರಿಸಿ ಆಯ್ಕೆ ಮಾಡುವಂತೆ ತಿಳಿಸಿದರು.ಜಲಾಶಯಗಳ ಇಂದಿನ ನೀರಿನ ಮಟ್ಟ
ಆನೆಗಳ ಆಯ್ಕೆ ಗಜ ಪಯಣ ಮತ್ತು ತಾಲಿಮೀನಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕಟ್ಟೆಚ್ಚರ ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
- ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
- ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
- ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ
- ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ
- ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್ ಖರ್ಗೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India