ಸಕ್ಕರೆ ಮತ್ತು ಪೌರಾಡಳಿತ ಸಚಿವ ರಾಗಿರುವ ಎಂಟಿಬಿ ನಾಗರಾಜ್ ಅವರಿಗೆ ಹೆಚ್ಚುವರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸ್ಥಾನ ನೀಡಲಾಗಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ಬಳಿಯಿದ್ದ ಈ ಖಾತೆಯನ್ನು ಎಂಟಿಬಿ ನಾಗರಾಜ್ ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ ಸಿ. ಮಾಲತಿ ಆದೇಶ ಹೊರಡಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಿಎಂ ಮುಂದೆ ಎಂಟಿಬಿ ನಾಗರಾಜ್ ಬೇಡಿಕೆ ಇಟ್ಟಿದ್ದರು. ನಾನು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯವನು. ನನಗೆ ನನ್ನ ಜಿಲ್ಲೆಯ ಉಸ್ತುವಾರಿ ಸ್ಥಾನ ಬೇಕು. ನನಗೆ ನನ್ನ ಜಿಲ್ಲೆಯನ್ನು ಹೊರತುಪಡಿಸಿ, ಈ ಹಿಂದೆ ಕೋಲಾರ ಜಿಲ್ಲೆಯ ಉಸ್ತುವಾರಿ ಸ್ಥಾನ ನೀಡಲಾಗಿತ್ತು.
2023ರಲ್ಲಿ ಎದುರಾಗಲಿರುವ ರಾಜ್ಯ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಬೇಕೆಂದರೆ, ನನಗೆ ನನ್ನ ತವರು ಜಿಲ್ಲೆಯ ಉಸ್ತುವಾರಿ ಬೇಕು ಎಂದು ಎಂಟಿಬಿ ನಾಗರಾಜ್ ಬೇಡಿಕೆ ಇಟ್ಟಿದ್ದರು. ಕೊನೆಗೂ ಎಂಟಿಬಿ ನಾಗರಾಜ್ ಬೇಡಿಕೆಯನ್ನು ಸಿಎಂ ಯಡಿಯೂರಪ್ಪ ಈಡೇರಿಸಿದ್ದಾರೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ