December 22, 2024

Newsnap Kannada

The World at your finger tips!

B nagendra

ಸಚಿವ ನಾಗೇಂದ್ರ ರಾಜೀನಾಮೆ: ಕಾಂಗ್ರೆಸ್ ಮೊದಲ ವಿಕೆಟ್ ಪತನ

Spread the love

ಬೆಂಗಳೂರು :ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಈ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಆಗಮಿಸಿದ ನಾಗೇಂದ್ರ ತಮ್ಮ ರಾಜಿನಾಮೆ ಪತ್ರವನ್ನು ಸಿಎಂಗೆ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ಸಲ್ಲಿಸಿದ ಮೊದಲ ಸಚಿವ ಎಂಬ ಅಪಖ್ಯಾತಿಗೆ ನಾಗೇಂದ್ರ ಒಳಗಾಗಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರ :ಜೆಡಿಎಸ್ ಗೆ ಭಾರಿ ಗೆಲುವು

ಎಸ್‌ಟಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಬಹುಕೋಟಿ ಹಗರಣ ಬಯಲಿಗೆ ಬಂದಿದೆ ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಇದೀಗ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದರು

Copyright © All rights reserved Newsnap | Newsever by AF themes.
error: Content is protected !!