ರಾಜ್ಯದಲ್ಲಿ 1 ರಿಂದ 5ನೇ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತಂತೆ ತಾಂತ್ರಿಕ ಸಮಿತಿ ಸಭೆ ಅನುಮತಿ ನೀಡಿದ ನಂತರ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್
ಪಠ್ಯ ಕಡಿತಗೊಳಿಸುವ ಸಂಬಂಧ ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲೆಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಒಂದೂವರೆ ವರ್ಷ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸ ಬೇಕಿದೆ ಎಂದರು
ಈ ವರ್ಷವು ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಆ ಬಗ್ಗೆ ಯಾವ ನಿರ್ಣಯ ಕೈಗೊಂಡಿಲ್ಲ. ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸಬಹುದಾ ಎಂಬ ಬಗ್ಗೆ ಯೋಚನೆ ಇದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಕೇರಳದಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆ ಆಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕೋವಿಡ್ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕೊರೊನಾ ಹೆಚ್ಚಾದ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು.
ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ನೆನೆಗುದಿಗೆ ಬಿದ್ದಿದೆ. ಮೂರು ವರ್ಷದಿಂದ ಸತತವಾಗಿ ಕೋರ್ಟ್ ಗೆ ಹೋಗಿ ಸ್ಟೇ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಕೋರ್ಟ್‍ಗೆ ಮನವಿ ಸಲ್ಲಿಸುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ. ಸ್ಟೇ ತೆರವುವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದರು.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ