ಕಾಂಗ್ರೆಸ್ ಗೆ ಪಲಾಯನ ಮಾಡಲು ಸಚಿವ ನಾರಾಯಣಗೌಡ ಸಿದ್ದತೆ

Team Newsnap
1 Min Read

ಮಂಡ್ಯದಲ್ಲಿ ಬಿಜೆಪಿ ಸಚಿವ ನಾರಾಯಣ ಗೌಡರು ಕಾಂಗ್ರೆಸ್ ಗೆ ಸೇರಲು ಪರೋಕ್ಷ ಸಿದ್ದತೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಮಾರ್ಚ್ 12ರಂದು ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸುವ ಮುನ್ನವೇ ಬೇರು ಬಿಡುವ ಉತ್ಸಾಹದಲ್ಲಿದ್ದ ಬಿಜೆಪಿಗೆ ಮರ್ಮಾಘಾತ ಎದುರಾಗಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಮಲ ಬಾವುಟ ಹಾರಿಸಿದವರೇ ಕಾಂಗ್ರೆಸ್ ನತ್ತ ಮುಖಮಾಡಲು ಸಜ್ಜಾಗಿದ್ದಾರೆ.

ಸಚಿವ ನಾರಾಯಣಗೌಡ ಅವರು ಪಕ್ಷಾಂತರದ ಸುಳಿವು ನೀಡಿದ್ದಾರೆ ಈ ಮೂಲಕ ಅವರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ಬಹುತೇಕ ಮನಸ್ಸು ತುಡಿಯುತ್ತಿದೆ.

ಮಂಡ್ಯದ ಕೆ.ಆರ್.ಪೇಟೆ ಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ನಿಜ. ಆದರೆ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆಪ್ತರು ಹಾಗೂ ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅಭಿಪ್ರಾಯ ಕೇಳಿದ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುವುದು ಎಂದಿದ್ದಾರೆ.

ಕೆ. ಆರ್.ಪೇಟೆ ಕಾಂಗ್ರೆಸ್‍ನಲ್ಲಿ ನಾಯಕತ್ವದ ಕೊರತೆ ಇದೆ. ಅದಕ್ಕಾಗಿ ಪಕ್ಷಕ್ಕೆ ಬರುವಂತೆ ಒತ್ತಾಯ ಇದೆ. ಯಾವುದೇ ನಿರ್ಧಾರ ಮಾಡಿದರೂ ಮಾಧ್ಯಮಗಳ ಮೂಲಕವೇ ತಿಳಿಸುತ್ತೇನೆ. ಈ ರೀತಿ ಹೇಳುವ ಮೂಲಕ ಕಾಂಗ್ರೆಸ್ ಸೇರುವ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ. ಇದನ್ನು ಓದಿ –ಇಂದಿನಿಂದ ಪೋಲಿಸ್ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆ ಪ್ರಕ್ರಿಯೆ ಆರಂಭ

Share This Article
Leave a comment