ವಿಜಯೇಂದ್ರ ಸಿಎಂ ಆಗಬೇಕು ಎಂಬ ಚರ್ಚೆಗೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಅವರು, ನಾನು ಯಡಿಯೂರಪ್ಪ ಅವರ ಮಗ ಇರಬಹುದು. ಆದರೆ ಇವತ್ತು ರಾಜ್ಯದಲ್ಲಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಇದನ್ನು ಓದಿ –ಮಂಡ್ಯ – ಪಾಂಡವಪುರ, ಅರಕೆರೆಯಲ್ಲಿ ಇಬ್ಬರು ಮಹಿಳೆಯರ ಅರ್ಧ ದೇಹಗಳು ಪತ್ತೆ
ನಾನು ಯಡಿಯೂರಪ್ಪನವರ ಹೋರಾಟ, ಸಂಘಟನೆ ನೋಡಿದ್ದೇನೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಉಪಯೋಗಿಸಿಕೊಂಡು, ಸಂಘಟನೆಗೆ ಬಲ ತುಂಬುವ ಕೆಲಸ ಮಾಡುತ್ತೇನೆ. ಮುಂದೇನಾಗಬೇಕು, ಎಂಎಲ್‍ಎ ಆಗಬೇಕು, ಮಂತ್ರಿ ಆಗಬೇಕು, ಮುಖ್ಯಮಂತ್ರಿ ಆಗಬೇಕು ಎಂಬ ಪ್ರಶ್ನೆ ಉದ್ಭವಿಸಲ್ಲ ಎಂದು ತಿಳಿಸಿದರು.
ಬಿಜೆಪಿಗೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಮುಖಂಡರು ಸೇರಿ ಕೆಲಸ ಮಾಡುತ್ತಿದ್ದೇವೆ. ಈ ಮಂತ್ರಿ, ಮುಖ್ಯಮಂತ್ರಿ ಯಾವುದನ್ನೂ ತಲೆಯಲ್ಲಿ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ಭವಿಷ್ಯದ ಬಗ್ಗೆ ನಾನು ಬಹಳ ತಲೆಕೆಡಿಸಿಕೊಂಡಿಲ್ಲ. ನಾನು ಮುಂದೆ ಏನು ಆಗಬೇಕು ಎಂದು ಪಕ್ಷ, ಕಾರ್ಯಕರ್ತರು ನಿರ್ಧಾರ ಮಾಡುತ್ತಾರೆ ಎಂದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ