ಶಿಕ್ಷಕರ ನೇಮಕಾತಿ ಹಗರಣ ಆರೋಪದ ಮೇಲೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಪ್ತ ಗೆಳತಿ ಅರ್ಪಿತಾ ಮೂಖರ್ಜಿ ತಮ್ಮ ಮನೆಯನ್ನು ಚಟರ್ಜಿಯವರು ಮಿನಿ ಬ್ಯಾಂಕ್‌ನಂತೆ ಬಳಸಿಕೊಂಡಿದ್ದರು ಎಂದು ಹೇಳಿದ್ದಾರೆ
ಕಳೆದ ಶುಕ್ರವಾರ ಜಾರಿ ನಿರ್ದೇಶನಾಲಯ ಶಿಕ್ಷಕರ ನೇಮಕಾತಿ ಹಗರಣದ ಆರೋಪದ ಮೇಲೆ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ದಾಳಿ ನಡೆಸಿತ್ತು.ಇದನ್ನು ಓದಿ –ಬಿಜೆಪಿ ನಾಯಕ ಪ್ರವೀಣ್ ಹತ್ಯೆ : ಮಂಗಳೂರು ಪೊಲೀಸರಿಂದ 15 ಶಂಕಿತರು ವಶಕ್ಕೆ
ಈ ವೇಳೆ ಅರ್ಪಿತಾ ಮನೆಯಲ್ಲಿ 21 ಕೋಟಿ ರು ಹಣದ ರಾಶಿ ಪತ್ತೆಯಾದ ಮರುದಿನವೇ ಪಾರ್ಥ ಚಟರ್ಜಿ ಅವರನ್ನು ಇಡಿ ಬಂಧಿಸಿತ್ತು.
ನಟಿ ಅರ್ಪಿತಾ ಮುಖರ್ಜಿ ತಮ್ಮ ಮನೆಯಲ್ಲಿ ಪತ್ತೆಯಾದ ಅಷ್ಟೂ ಹಣ ಪಾರ್ಥ ಚಟರ್ಜಿಗೆ ಸೇರಿದ್ದು ಎಂದು ತಿಳಿಸಿದ್ದಾರೆ.
ಪಾರ್ಥ ಅವರು ಎಲ್ಲಾ ಹಣವನ್ನು ನನ್ನ ಮನೆಯ ಒಂದೇ ಕೋಣೆಯಲ್ಲಿಡುತ್ತಿದ್ದರು. ಪ್ರತೀ ವಾರ ಅಥವಾ 10 ದಿನಗಳಿಗೊಮ್ಮೆ ಪಾರ್ಥ ನನ್ನ ಮನೆಗೆ ಭೇಟಿ ನೀಡುತ್ತಿದ್ದರು. ಆದರೆ ತನ್ನ ಮನೆಯಲ್ಲಿ ಅವರು ಎಷ್ಟು ಹಣವನ್ನು ಇಟ್ಟಿದ್ದಾರೆ ಎಂಬ ಮಾಹಿತಿಯನ್ನು ತಿಳಿಸಿರಲಿಲ್ಲ ಎಂದಿದ್ದಾರೆ.
ಚಟರ್ಜಿಯವರು ನನ್ನ ಮನೆ ಹಾಗೂ ಇನ್ನೊಬ್ಬ ಮಹಿಳೆಯ ಮನೆಯನ್ನೂ ಕೂಡ ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾರೆ. ಆ ಮಹಿಳೆ ಕೂಡಾ ಚಟರ್ಜಿಯವರ ಆಪ್ತ ಸ್ನೇಹಿತೆ ಎಂಬ ಗುಟ್ಟನ್ನು ನಟಿ ಅರ್ಪಿತಾ ಬಿಟ್ಟುಕೊಟ್ಟಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ