ನಂದಿನ ಹಾಲಿನ ದರ ಏರಿಕೆಯ ಸುಳಿವು ಕೊಟ್ಟ ಸಚಿವ ರಾಜಣ್ಣ

Team Newsnap
1 Min Read

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಏರಿಕೆ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು.

ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು.

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದೆ.ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಉದ್ಯಮ ಶಕ್ತಿ ಯೋಜನೆಯಲ್ಲಿ ಪೆಟ್ರೋಲ್ ಬಂಕ್

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ 14 ರು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದಾರೆ, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.

Share This Article
Leave a comment