ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಲು ಎಸ್.ಟಿ ಸೋಮಶೇಖರ್ ಅಸಮರ್ಥರು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಟೀಕಿಸಿದ್ದಾರೆ.
ನಗರದಲ್ಲಿ ಕಾನೂನು ಸುವವ್ಯಸ್ಥೆ ಹದಗೆಟ್ಟಿದೆ. ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ ಎಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ನಗರದಲ್ಲಿರುವ ಶೇ. 5೦ರಷ್ಟು ಪೊಲೀಸರು ಕೋವಿಡ್ ಕರ್ತವ್ಯದಲ್ಲಿದ್ದಾರೆ. ಅವರನ್ನು ಕಾನೂನು ಸುವ್ಯವಸ್ಥೆಗೆಂದೇ ನಿಯೋಜಿಸಬೇಕು. ಕೋವಿಡ್ ಕರ್ತವ್ಯಕ್ಕೆ ಬೇರೆ ವ್ಯವಸ್ಥೆ ಮಾಡಬೇಕೆಂದರು.
ಮೈಸೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತೊಮ್ಮೆ ವಚನ ಭ್ರಷ್ಟರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ಆರೋಪಿಸಿದರು. ಜೆಡಿಎಸ್ ಬಿಜೆಪಿಯ “ಬಿ’ಟೀಂ ಎನ್ನುವುದನ್ನು ಕುಮಾರಸ್ವಾಮಿ ಸಾಬೀತು ಮಾಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿಲುವೂ ಕೋಮುವಾದಿಗಳ ಪರವೇ ಇದೆ ಎಂದು ಟೀಕಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್