ಸಾಲಮನ್ನ ಆಸೆಗೆ ಬರಗಾಲ ಹೇಳಿಕೆ ವಿವಾದ: ಸಚಿವ ಶಿವಾನಂದ ಪಾಟೀಲ್ ರಾಜೀನಾಮೆಗೆ ಬಿಜೆಪಿಯಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,ಸಿಟಿ ರವಿ ಸೇರಿದಂತೆ ಅನೇಕ ಮುಖಂಡರು ಸಚಿವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.
ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ರೈತರ ಕುರಿತು ಸಚಿವ ಶಿವಾನಂದ ಪಾಟೀಲ್ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ.
ಕೃಷ್ಣಾ ನದಿ ನೀರು ಪುಕ್ಸಟ್ಟೆ ಸಿಗುತ್ತದೆ, ಕರೆಂಟ್ ಕೂಡ ಪುಕ್ಸಟ್ಟೆ ಕೊಡಲಾಗಿದೆ.ಅನೇಕ ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟಿದ್ದಾರೆ. ಗೊಬ್ಬರನೂ ಉಚಿತ ಕೊಟ್ಟರು. ಸಾಲ ಮಾಡಿದ ರೈತರು ಬರಗಾಲ ಬರಲಿ ಎಂದು ನಿರೀಕ್ಷಿಸುತ್ತಾರೆ. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಅನ್ನದಾತರ ಬಗ್ಗೆ ಸಚಿವ ಶಿವಾನಂದ ಪಾಟೀಲ ಉಡಾಫೆ ಮಾತುಗಳನ್ನಾಡಿದ್ದಾರೆ.
ಶಿವಾನಂದ ಪಾಟೀಲರಿಗೆ ಬುದ್ದಿಭ್ರಮಣೆಯಾಗಿದೆಯೋ ಗೊತ್ತಿಲ್ಲ.ಅವರು ಕೂಡಲೇ ರೈತರ ಕ್ಷಮೆ ಕೇಳಬೇಕು.ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.ಸಿಟಿ ರವಿ ಕೂಡ ಆಕ್ರೋಶ ವ್ಯಕ್ತಪಡಿಸಿದರು.
More Stories
ಕೊಡಗಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ
ಮೆಟ್ರೊ ದರ ಪರಿಷ್ಕರಣೆ: ಶೇ 70ಕ್ಕಿಂತ ಹೆಚ್ಚು ಏರಿಕೆಯಾದಲ್ಲಿ ಶೇ 30ರಷ್ಟು ಇಳಿಕೆ
ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ