- ಕನಿಷ್ಠ ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳಲು ಸಚಿವರ ಮನವಿ
ಮೈಸೂರಿನ ಬಂಡಿಪಾಳ್ಯ ಎಪಿಎಂಸಿಗೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದರು.
ಕೇಂದ್ರ ಸರ್ಕಾರ ಸಹ ಭತ್ತ, ಗೋಧಿ ಸೇರಿದಂತೆ ಅನೇಕ ಆಹಾರ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರದಿಂದಲೂ ರೈತರಿಗೆ ಬೆಂಬಲ ಬೆಲೆ ನೀಡುತ್ತಿದ್ದು, ರಾಜ್ಯದ ಹಲವೆಡೆ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಎಪಿಎಂಸಿ ಮುಚ್ಚುವುದಿಲ್ಲ :
ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರ ಸಹ ಈ ಸಾಲಿನ ಬಜೆಟ್ ನಲ್ಲಿ ಎಪಿಎಂಸಿಗಳ ಉನ್ನತೀಕರಣಕ್ಕೆ ಅನುದಾನ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ಸಹ ಎಪಿಎಂಸಿಗಳ ಮೂಲಕ ರೈತರಿಗೆ ಮುಟ್ಟಿಸಬೇಕಾದ ಎಲ್ಲಾ ಕಾರ್ಯ ಕ್ರಮಗಳನ್ನು ಅನುಷ್ಠಾನ ಗೊಳಿಸಲಿದೆ ಎಂದು ಸಚಿವರು ತಿಳಿಸಿದರು.
19.99 ಲಕ್ಷ ರೈತರಿಗೆ 12975.34 ಕೋಟಿ ರೂಪಾಯಿ ಸಾಲ; ಎಸ್ ಟಿ ಎಸ್
ಕೋವಿಡ್ ನಡುವೆಯೂ ರೈತರಿಗೆ ಬೆಳೆ ಸಾಲಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಆದೇಶ ದಂತೆ ಸಹಕಾರ ಇಲಾಖೆ ಮುಖಾಂತರ ರೈತರಿಗೆ ಸಾಲ ನೀಡಿಕೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ.
ರಾಜ್ಯದ 24.50 ಲಕ್ಷ ರೈತರಿಗೆ 15300 ಕೋಟಿ ರೂಪಾಯಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ 19,99,508 ರೈತರಿಗೆ 12975.34 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ