ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನ ಆರ್.ಟಿ.ನಿವಾಸದಲ್ಲಿ ಶನಿವಾರ ಭೇಟಿ ಮಾಡಿದ ಸಹಕಾರ ಸಚಿವ ಮತ್ತು ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, 2021 ನೇ ಸಾಲಿನ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಮುಖ್ಯಮಂತ್ರಿಗಳು ಸಚಿವರ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರನ್ನೂ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ಡಿಸಿ ಡಾ. ಬಗಾದಿ ಗೌತಮ್ ಮತ್ತಿತರರು ಇದ್ದರು.
More Stories
ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶವೇ ಇಲ್ಲ: ಜಮೀರ್ ಅಹ್ಮದ್ ಖಾನ್
ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು; ಇತಿಹಾಸ ನಿರ್ಮಿಸಿದ ಆಟಗಾರ್ತಿ!
ಸಂಖ್ಯಾ ತಜ್ಞ ಆರ್ಯವರ್ಧನ್ ಕುಟುಂಬದ ಆಸ್ತಿ 5 ಸಾವಿರ ಕೋಟಿ ರು : ಬಿಗ್ ಬಾಸ್ ನಲ್ಲಿ ಬಹಿರಂಗ