January 12, 2025

Newsnap Kannada

The World at your finger tips!

f04a58cb da0f 40fc 810f 435008e43dfd

ಪರಿಷತ್ ನಲ್ಲಿ ಗೂಂಡಾಗಿರಿ ಮಾಡಿದವರ ಅಮಾನತ್ತಿಗೆ ಸಚಿವ ಎಸ್ ಟಿ ಎಸ್ ಒತ್ತಾಯ

Spread the love

ಪಕ್ಷದವರ ಮೇಲೆ ಸಿದ್ದರಾಮಯ್ಯ ಅವರು ಕ್ರಮ ತೆಗೆದುಕೊಳ್ಳಲಿ

ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ತಮ್ಮ ಪಕ್ಷದ ನಾಯರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಒತ್ತಾಯಿಸಿ ದರು.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೌರವಾನ್ವಿತ ಹಿರಿಯ ಸದಸ್ಯರೂ ಉಪ ಸಭಾಪತಿಗಳಾದ ಧರ್ಮೇಗೌಡರನ್ನು ಎಳೆದಾಡಿ ಗೂಂಡಾಗಿರಿ ಮಾಡಿದ ಹಾಗೆ ಬಲತ್ಕಾರವಾಗಿ ಖುರ್ಚಿಯಿಂದ ಎಳೆದಾಡಿದ್ದು ಖಂಡನೀಯ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಗೂಂಡಾಗಿರಿ ಮಾಡಿದವರನ್ನು ಕಾಂಗ್ರೆಸ್ ಅಮಾನತು ಮಾಡಲಿ

ಕಾಂಗ್ರೆಸ್ ನವರಿಗೆ ಮರ್ಯಾದೆ ಉಳಿಸಿಕೊಳ್ಳಬೇಕೆಂದಿದ್ದರೆ ಹೀಗೆ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಬೇಕು. ಚಿಂತಕರ, ಬುದ್ದಿವಂತರ ಚಾವಡಿ ಎಂದೇ ಹೆಸರಾಗಿದ್ದ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಇಂತಹ ಒಂದು ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ ಎಂದರೆ ಹೇಗೆ ಎಂದು ಸಚಿವರು ಪ್ರಶ್ನಿಸಿದರು.

ಸಭಾಪತಿಗಳ ಮೇಲೆ ಆರೋಪ ಬಂದ ಮೇಲೆ ಅವರು ಆ ಖುರ್ಚಿಯಲ್ಲಿ ಕೂರುವಂತಿಲ್ಲ. ಅವಿಶ್ವಾಸ ನಿರ್ಣಯ ಗೊತ್ತುವಳಿಯಾದ ಮೇಲೆ ಸಭಾಪತಿಗಳಾದವರು ಖುರ್ಚಿಯನ್ನು ಬಿಟ್ಟುಕೊಡಬೇಕು. 14 ದಿನದ ಅವಧಿಯಲ್ಲಿ ಅವಕಾಶ ಕಲ್ಪಿಸಿ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು. ಆದರೆ, ಅದಕ್ಕೆ ಅವಕಾಶ ಕೊಡದ ಸಭಾಪತಿಗಳ ನಡೆ ಸರಿಯಲ್ಲ ಎಂದು ಸಚಿವರು ಖಂಡಿಸಿದರು.

ಕಾಂಗ್ರೆಸ್ ನವರ ಷಡ್ಯಂತ್ರ

ಇದು ಕಾಂಗ್ರೆಸ್ ನವರ ಪೂರ್ವ ನಿಯೋಜಿತ ಸಂಚು. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿಯೇ ಗೂಂಡಾಗಿರಿ ಮಾಡುವ ಹಾಗೂ ದಾಂಧಲೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಇದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ಹೇಳಿದರು.

Copyright © All rights reserved Newsnap | Newsever by AF themes.
error: Content is protected !!