ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.ಇದನ್ನು ಓದಿ –ತೆರಕಣಾಂಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಹೃದಯಘಾತ : ಯುವಕನ ಸಾವು – ಸ್ಥಳೀಯರ ಗಲಾಟೆ
ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಿ ಪಯಣ ಆರಂಭಿಸಲಾಯಿತು. ಬೆಳ್ಳಂಬೆಳಗ್ಗೆ ವರುಣನ ಸಿಂಚನದ ನಡುವೆ ಕಲಾತಂಡಗಳು, ಮಂಗಳವಾದ್ಯಗಳ ಜತೆಗೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆಹಾಕಿದವು.
ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಇಂದು ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಇಂದು ಆರಂಭಗೊಂಡಿರುವ ಆನೆಗಳ ಪಯಣ ಆ.10ರಂದು ಅರಮನೆಗೆ ಬರುವ ಮೂಲಕ ಪೂರ್ಣಗೊಳ್ಳಲಿದೆ.
ಅಂದು ಅರಮನೆಗೆ ಆಗಮಿಸುವ ಗಜ ಪರಿವಾರವನ್ನು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಬರಮಾಡಿಕೊಳ್ಳಲಾಗುತ್ತದೆ.
ಶಾಸಕರಾದ ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಎಸ್.ಪಿ.ಚೇತನ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು