Trending

ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವಾಲಯ ಒಂದೇ ಖಾತೆ ವ್ಯಾಪ್ತಿಗೆ ತರಲು ಚಿಂತನೆ : ಸಚಿವ ಡಾ.ಕೆ.ಸುಧಾಕರ್

” ಜನವರಿಯಿಂದ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಪರೀಕ್ಷೆ ಉಚಿತ “

ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಗುಣಮಟ್ಟದ ಸೇವೆ ಸಿಗಬೇಕು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆಯಾಗಿ ಮಾಡುವ ಚಿಂತನೆ ಇದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದಲೇ ಎಲ್ಲ ಪರೀಕ್ಷೆಗಳನ್ನು ಉಚಿತ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸ ಆಕ್ಸಿಜನ್ ಘಟಕ, 200 ಹಾಸಿಗೆಗಳ ನೇತ್ರ, ಇಎನ್ ಟಿ ವಾರ್ಡ್, 90 ಹಾಸಿಗೆಗಳ ಮಕ್ಕಳ ವಾರ್ಡ್ ಉದ್ಘಾಟಿಸಿದ ಬಳಿಕ ಮಾತನಾಡಿದ ಸಚಿವರು,
ಈ ಎರಡೂ ಇಲಾಖೆಗಳು ಒಂದೇ ನಿರ್ವಹಣೆಯಲ್ಲಿರಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡೂ ಇಲಾಖೆಗಳ ಹೊಣೆಯನ್ನು ನನಗೆ ನೀಡಿದ್ದಾರೆ. ಇದರಿಂದ ಆರೋಗ್ಯ ಕ್ಷೇತ್ರದ ನಿರ್ವಹಣೆ ಸುಲಭವಾಗಲಿದೆ. ಮುಂದಿನ ದಿನಗಳಲ್ಲಿ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಬಗೆಯ ಪರೀಕ್ಷೆಗಳನ್ನು ಜನವರಿಯಿಂದಲೇ ಉಚಿತ ಮಾಡಲಾಗುವುದು ಎಂದರು.

ಆಸ್ಪತ್ರೆಗಳಲ್ಲಿ ಸ್ವಚ್ಛತೆ ಇಲ್ಲ

ಸರ್ಕಾರಿ ಆಸ್ಪತ್ರೆಗಳಲ್ಲಿ ಶೌಚಾಲಯ, ವಾರ್ಡ್ ಸ್ವಚ್ಛವಿಲ್ಲ ಎಂಬ ಆಪಾದನೆ ಇದೆ. ಬೆಳಗಾವಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ತಿಂಗಳಿಗೆ 36 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಆದರೂ ಸ್ವಚ್ಛವಿಲ್ಲ ಎಂದರೆ ನೋವಾಗುತ್ತದೆ. ಖಾಸಗಿಗಿಂತ ಸರ್ಕಾರಿ ಆಸ್ಪತ್ರೆಗೆ ಹೆಚ್ಚು ಖರ್ಚು ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗೆ ಸಿಗುವ ಸೌಲಭ್ಯ ಹಾಗೂ ಅವರು ಮಾಡುವ ಸೇವೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲೂ ದೊರೆಯಬೇಕು. ಎಲ್ಲರೂ ಈ ಕುರಿತು ಆತ್ಮವಿಮರ್ಶೆ ಮಾಡಿ ಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಲಸಿಕೆ ವಿತರಣೆಗೆ ಸಿದ್ಧತೆ:

ಕೋವಿಡ್ ಲಸಿಕೆ ಬಂದ ನಂತರ ವಿತರಣೆಯಲ್ಲಿ ತೊಂದರೆ ಆಗಬಾರದೆಂದು ಈಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ವಿತರಿಸಲಾಗುವುದು. ಲಸಿಕೆ ಸಂಗ್ರಹಣೆಗೆ ಎಲ್ಲ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸಚಿವರು ಹೇಳಿದ ಇತರೆ ಅಂಶಗಳು

  1. ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು
  2. ವೈದ್ಯಾಧಿಕಾರಿಗಳು ವಾರದಲ್ಲಿ ಒಂದೆರಡು ದಿನ ಪ್ರವಾಸ ಮಾಡಿ, ಸ್ಥಳೀಯ ಸರ್ಕಾರಿ ಆರೋಗ್ಯ ಸೇವೆಯಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಬೇಕು
  3. ಜನಸಂಖ್ಯೆಗೆ ತಕ್ಕಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು
  4. ಕೋವಿಡ್ ನಿಯಂತ್ರಣದಲ್ಲಿ ಬೆಳಗಾವಿ ಮಾದರಿ. ಈ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೊಳಗಾದವರಲ್ಲಿ 97% ರಷ್ಟು ಮಂದಿ ಗುಣಮುಖರಾಗಿದ್ದಾರೆ. 2 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ. ಕೋವಿಡ್ ಮರಣ ಪ್ರಮಾಣ 0.8% ರಷ್ಟಿದೆ
Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024