January 28, 2026

Newsnap Kannada

The World at your finger tips!

PSI , harassment , congress

Misbehavior with female PSI- Tumkur Youth Congress president arrested ಮಹಿಳಾ ಪಿಎಸ್ ಐ ಜೊತೆ ಅಸಭ್ಯ ವರ್ತನೆ- ತುಮಕೂರಿನ ಯುವ ಕಾಂಗ್ರೆಸ್ ಅಧ್ಯಕ್ಷನ ಬಂಧನ

ಮಹಿಳಾ ಪಿಎಸ್ ಐ ಜೊತೆ ಅಸಭ್ಯ ವರ್ತನೆ- ತುಮಕೂರಿನ ಯುವ ಕಾಂಗ್ರೆಸ್ ಅಧ್ಯಕ್ಷನ ಬಂಧನ

Spread the love

ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರಿನ ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಿದ್ದಾರೆ.

ತುಮಕೂರಿನ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.ಅಬ್ಕಾರಿ ಹಗರಣ : ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧಿಸಿದ ಸಿಬಿಐ

ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಬಂಧಿಸಲಾಗಿದೆ.

ಪ್ರಕರಣವೊಂದರಲ್ಲಿ ವಶಕ್ಕೆ ಪಡೆದ ನಾಲ್ವರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಶಶಿ ಹುಲಿಕುಂಟೆ ಪೊಲೀಸರಿಗೆ ಧಮಕಿ ಹಾಕಿದ್ದಾನೆ.

ಬಿಡಲು‌ ಸಾಧ್ಯ ಇಲ್ಲ ಎಂದಾಗ ಇನ್ನು 3 ತಿಂಗಳು ಕಾಯಿರಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾನೆ.

ನಂತರ ವಶಕ್ಕೆ ಪಡೆದ 4 ಜನರ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲನ್ನು ಕದ್ದಿದ್ದಾರೆ ಎಂದು ಠಾಣೆ ಎದುರು ಪ್ರತಿಭಟನೆ ಮಾಡುತ್ತೇನೆ ಎಂದು ಆವಾಜ್ ಹಾಕಿದ್ದಾನೆ.

ಈ ವೇಳೆ ಶಶಿ ಹುಲಿಕುಂಟೆ ಮಾತಿಗೆ ಮಹಿಳಾ ಪಿಎಸ್‌ಐ ಪ್ರತಿರೋಧ ಒಡ್ಡಿದಾಗ, ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೇ ಠಾಣೆಯಲ್ಲಿದ್ದ 4 ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಯಾಮಾರಿಸಿ ಎಸ್ಕೇಪ್ ಮಾಡಿದ್ದಾನೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿ ಹುಲಿಕುಂಟೆಯನ್ನು ಐಪಿಸಿ ಸೆಕ್ಸನ್- 353, 507ರ ಅಡಿ ಬಂಧಿಸಿ 3ನೇ ಹೆಚ್ಚುವರಿ ಜೆಎಮ್‌ಎಫ್‌ಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

error: Content is protected !!